ಕರಾವಳಿಯ ಮೂರು ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆ ಆರಂಭ| ಜನಸಂಕಲ್ಪ ಸಭೆಯಲ್ಲಿ ಸಿಎಂ ಘೋಷಣೆ

ಸಮಗ್ರ ನ್ಯೂಸ್: ಬಹುನಿರೀಕ್ಷಿತ ಉಡುಪಿ ಮಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಪಡಿತರ ಮೂಲಕ ಕುಚಲಕ್ಕಿ ವಿತರಣೆ ಕಾರ್ಯಕ್ರಮವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಕಾಪುವಿನಲ್ಲಿ ಜನ ಸಂಕಲ್ಪ ಸಭೆಯಲ್ಲಿ ಘೋಷಿಸಿದ್ದಾರೆ.

. Ad Widget . Ad Widget . Ad Widget

ಈಗ ನೀಡುತ್ತಿರುವ ಪಡಿತರ ಅಕ್ಕಿ ಸಾರ್ವಜನಿಕರಿಗೆ ಉಪಯೋಗಕ್ಕೆ ಬರುತ್ತಿಲ್ಲವೆಂಬ ಹಿನ್ನೆಲೆಯಲ್ಲಿ ಪಡಿತರ ವ್ಯವಸ್ಥೆಗೆ ಕುಚಲಕ್ಕಿ ನೀಡುವ ವ್ಯವಸ್ಥೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳು ಹೇಳುತ್ತಲೇ ವೇದಿಕೆಯಲ್ಲಿ ಎದ್ದು ನಿಂತು ಮುಖ್ಯಮಂತ್ರಿಗಳಿಗೆ ಕೈಮುಗಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದರು.

. Ad Widget .

Leave a Comment

Your email address will not be published. Required fields are marked *