Ad Widget .

ಮಂಗಳೂರು: ಸೆಂಟ್ರಲ್ ಮಾರ್ಕೆಟ್ ನಲ್ಲಿ ಭೀಪ್ ಸ್ಟಾಲ್ ಗಳಿದ್ದರೆ ನಾನು ಭೂಮಿಪೂಜೆಯನ್ನೇ ಮಾಡುವುದಿಲ್ಲ: ವೇದವ್ಯಾಸ್ ಕಾಮತ್

ಸಮಗ್ರ ನ್ಯೂಸ್: ಸೆಂಟ್ರಲ್ ಮಾರ್ಕೆಟ್ ನಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟದಲಲ್ಲಿ ಭೀಪ್ ಸ್ಟಾಲ್ ಗಳಿದ್ದರೆ ನಾನು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆಯನ್ನೇ ಮಾಡುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಬೀಫ್ ಸ್ಟಾಲ್ ಕುರಿತು ಇಂದು ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿದ ಶಾಸಕ ಕಾಮತ್, ಈ ಹಿಂದಿನ ಮಾರುಕಟ್ಟೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನವಾಗಿ 114 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ನೂತನವಾಗಿ ನಿರ್ಮಿಸುವ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅವಕಾಶ ನೀಡುವುದಿಲ್ಲ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನ ಜಾರಿಗೊಳಿಸಿದ ಬಳಿಕ ಗೋಹಂತಕರ ಆಸ್ತಿ ಜಪ್ತಿ, ಕಠಿಣ ಕಾನೂನು ಕ್ರಮಗಳ ಮೂಲಕ ಗೋಹಂತಕರಿಗೆ ಸ್ಪಷ್ಟ ಸಂದೇಶ ನೀಡಲಾಗಿದೆ ಎಂದು ಹೇಳಿದರು.

Ad Widget . Ad Widget . Ad Widget .

ನೂತನ ಮಾರುಕಟ್ಟೆ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಿದ್ದ‌ ಸಂದರ್ಭದಲ್ಲಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿರಲಿಲ್ಲ. ಸದ್ಯ ಗೋಹತ್ಯೆ ನಿಷೇಧ ಕಾನೂನು ಜಾರಿಗೊಂಡಿದ್ದು ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅನುಮತಿ ನೀಡಲಾಗುವುದಿಲ್ಲ. ಹಿಂದೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಬದಲಾಯಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಯಾವುದೇ ಕಾರಣಕ್ಕೂ ಬೀಫ್ ಸ್ಟಾಲ್ ಕಾರ್ಯಾಚರಿಸಲು ಅನುಮತಿ ನೀಡುವುದಿಲ್ಲ ಎಂದು ಹೇಳಿದರು.

Leave a Comment

Your email address will not be published. Required fields are marked *