ಕನ್ನಡದ ಹಿರಿಯ ನಟ ಲೋಹಿತಾಶ್ವ ವಿಧಿವಶ

ಸಮಗ್ರ ನ್ಯೂಸ್: ಕನ್ನಡದ ಹಿರಿಯ ನಟ ಲೋಹಿತಾಶ್ವ ಅವರು ವಿಧಿವಶರಾಗಿದ್ದಾರೆ, ಇಂದು ಮಧ್ಯಾಹ್ನ ಅವರು ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

Ad Widget ... ..

ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಅಕ್ಟೋಬರ್​ 4ರಂದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.

Ad Widget

ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆಂಗ್ಲ ಪ್ರಾಧ್ಯಾಪಕಾರಾಗಿ ಅವರು ತಮ್ಮನ್ನು ಗುರುತಿಸಿಕೊಂಡಿದ್ದರು.

ಇವರ ಪುತ್ರ ಶರತ್ ಲೋಹಿತಾಶ್ವ ಅವರೂ ಚಿತ್ರರಂಗದಲ್ಲಿ ಮಿಂಚಿದ್ದಾರೆ. ಖಳನಾಯಕನ ಪಾತ್ರದಲ್ಲಿ ಮಿಂಚಿದ್ದ ಶರತ್ ಅವರು ಕೂಡಾ ಸ್ಯಾಂಡಲ್​​ವುಡ್​ನಲ್ಲಿ ಹಲವು ಹಿಟ್ ಸಿನಿಮಾಗಳಲ್ಲಿ ಖಳನಾಯಕನ ಪಾತ್ರ ಮಾಡಿ ಪ್ರಸಿದ್ಧರಾಗಿದ್ದಾರೆ.

Leave a Comment

Your email address will not be published. Required fields are marked *