Ad Widget .

ಸಾನಿಯಾ- ಶೋಹೆಬ್ ಸಂಸಾರದಲ್ಲಿ ಒಡಕು? ಮುರಿದು ಬೀಳುತ್ತಾ ಮೂಗುತಿ ಸುಂದರಿಯ ಪ್ರೇಮಸೌಧ

ಸಮಗ್ರ ನ್ಯೂಸ್: ಭಾರತೀಯ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಹೆಬ್​ ಮಲಿಕ್ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ನಿನ್ನೆಯಿಂದ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಸಾನಿಯಾ ಪೋಸ್ಟ್​ ಮಾಡಿರುವ ಇನ್​ಸ್ಟಾಗ್ರಾಂ ಸ್ಟೋರಿ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದ್ದು, ಸ್ಟಾರ್​ ದಂಪತಿ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಅನುಮಾನ ಗಟ್ಟಿಯಾಗಿದೆ.​

Ad Widget . Ad Widget .

ಅವಿನಾಶ್​ ಆರ್ಯನ್​ ಎಂಬುವರ ಸಾನಿಯಾರ ಇನ್​ಸ್ಟಾಗ್ರಾಂ ಸ್ಟೋರಿಯನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅದರಲ್ಲಿ ಬರೆದಿರುವ ಸಾಲುಗಳ ಸಾರಾಂಶ ಈ ಮುಂದಿನಂತಿದೆ. ‘ಒಡೆದ ಹೃದಯಗಳು ಎಲ್ಲಿಗೆ ಹೋಗುತ್ತವೆ? ಅಲ್ಲಾನನ್ನು ಹುಡುಕಲು’ ಎಂದು ಸಾನಿಯಾ ಮಾರ್ಮಿಕವಾಗಿ ಬರೆದುಕೊಂಡಿದ್ದಾರೆ. ಅಲ್ಲದೆ, ಕೊನೆಯಲ್ಲಿ ನಂಬಿಕೆಯ ಸೇವಕ ಎಂದು ಉಲ್ಲೇಖಿಸಿದ್ದಾರೆ. ಇದೀಗ ಈ ಸ್ಟೋರಿ ವೈರಲ್​ ಆಗುತ್ತಿದ್ದು, ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಇಬ್ಬರ ನಡುವಿನ ಸಂಬಂಧದ ಬಗ್ಗೆ ಇನ್ನಷ್ಟು ಚರ್ಚೆಯಾಗುತ್ತಿದೆ.

Ad Widget . Ad Widget .

ಸಾನಿಯಾ ಮತ್ತು ಮಲಿಕ್​, ಕ್ರೀಡಾಲೋಕದ ಅತ್ಯಂತ ಸುಂದರವಾದ ಜೋಡಿ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಸಾಂಪ್ರದಾಯಿಕ ಎದುರಾಳಿಗಳ ಆಟಗಾರರಿಬ್ಬರ ಪ್ರೇಮ ವಿವಾಹವು ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟರೂ ಎಲ್ಲ ವಿವಾದಗಳನ್ನು ಬದಿಗೊತ್ತಿ 2010ರಲ್ಲಿ ಇಬ್ಬರೂ ಮದುವೆ ಆಗಿದ್ದಾರೆ. ದಂಪತಿಗೆ ಇಜಾನ್​ ಮಿರ್ಜಾ ಮಲ್ಲಿಕ್ ಹೆಸರಿನ ಮಗನಿದ್ದಾನೆ. ಸದ್ಯ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಮಗ ಇಜಾನ್​ಗೆ ಸಹ-ಪೋಷಕರಾಗಿದ್ದಾರೆ.

ಇಬ್ಬರ ನಡುವೆ ಏನು ನಡೆದಿದೆ ಎಂಬುದು ಯಾರಿಗೂ ತಿಳಿದಿಲ್ಲ. ಆದರೆ, ಶೋಯೆಬ್, ತನ್ನ ಟಿವಿ ಶೋನಲ್ಲಿ ಸಾನಿಯಾಗೆ ಮೋಸ ಮಾಡಿದ್ದಾರೆ ಎಂದು ಕೆಲವು ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ಸುದ್ದಿಗೆ ಸಾನಿಯಾ ಆಗಲಿ ಅಥವಾ ಶೋಯೆಬ್ ಆಗಲಿ ಇನ್ನೂ ಪ್ರತಿಕ್ರಿಯಿಸಿಲ್ಲ.

Leave a Comment

Your email address will not be published. Required fields are marked *