Ad Widget .

ನಾಡಪ್ರಭುವನ್ನು ರಾಜಕೀಯಕ್ಕೆ ಎಳೆತಂದ ಬಿಜೆಪಿ| ಮಾಜಿ ಪ್ರಧಾನಿಗೂ ಆಹ್ವಾನ ನೀಡದ ರಾಜ್ಯಸರ್ಕಾರ

ಸಮಗ್ರ ನ್ಯೂಸ್: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಬಿಜೆಪಿ ರಾಜಕಾರಣ ಮಾಡಿದೆ ಎಂದು ಜೆಡಿಎಸ್ ಆರೋಪಿಸಿದೆ. ಒಕ್ಕಲಿಗ ಸಮುದಾಯದ ಪ್ರಮುಖ ನೇತಾರ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಸಮಾರಂಭಕ್ಕೆ ಆಹ್ವಾನಿಸದೇ ಇರುವ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಜೆಡಿಎಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

Ad Widget . Ad Widget . Ad Widget .

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪಕ್ಷವು, ಬಿಜೆಪಿ ಸರಕಾರ ಹಾಗೂ ಆ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದೆ. ಅಲ್ಲದೆ, ಕೆಂಪೇಗೌಡರನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ರಾಜಕೀಯಕ್ಕೆ ಎಳೆದು ತಂದಿದ್ದಾರೆ ಎಂದು ಕಿಡಿಕಾರಿದೆ.

Ad Widget .

ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಹೆಚ್.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಪಕ್ಷವು ಬೇಸರ ವ್ಯಕ್ತಪಡಿಸಿದೆ.

ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ್ದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ? ಎಂದು ಜೆಡಿಎಸ್‍ ಟ್ವೀಟ್ ಮೂಲಕ ಪ್ರಶ್ನೆ ಮಾಡಿದೆ. ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ ಎಂದು ಪಕ್ಷ ಹೇಳಿದೆ.

Leave a Comment

Your email address will not be published. Required fields are marked *