Ad Widget .

ಮತ್ತೆ ಚುರುಕಾದ ಹಿಂಗಾರು| ರಾಜ್ಯದ ಒಳನಾಡು, ಕರಾವಳಿಯಲ್ಲಿ ಮಳೆ ಸಾಧ್ಯತೆ| 8 ಜಿಲ್ಲೆಗಳಿಗೆ ಹಳದಿ ಅಲರ್ಟ್

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಕರ್ನಾಟಕದ ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ.

Ad Widget . Ad Widget .

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ಶನಿವಾರ) ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ.

Ad Widget . Ad Widget .

ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಕರ್ನಾಟಕದ ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ನವೆಂಬರ್‌ 13 ಮತ್ತು 14ರಂದು ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಹಾಸನ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ. ಹಾಗೇ, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ನವೆಂಬರ್ 14ರಂದು ಭಾರೀ ಮಳೆಯಾಗಲಿದ್ದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಾದ್ಯಂತ ಒಣ ಹವೆ ಮುಂದುವರಿಯಲಿದೆ. ಈ ಭಾಗದಲ್ಲಿ ಮಳೆ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಆಂಧ್ರಪ್ರದೇಶ, ಯಾನಂ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಕರಾವಳಿ ಕರ್ನಾಟಕದಲ್ಲಿ ಮಿಂಚಿನ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಮತ್ತು ಮಧ್ಯ ಭಾರತದ ಒಳನಾಡಿನ ಪ್ರದೇಶಗಳಲ್ಲಿ ಮುಂಜಾನೆ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ. ಇತರ ಪ್ರದೇಶಗಳಲ್ಲಿ ಶುಷ್ಕ ಹವಾಮಾನವನ್ನು ನಿರೀಕ್ಷಿಸಲಾಗಿದೆ.

ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ನವೆಂಬರ್ 13ರವರೆಗೆ ಭಾರಿ ಮಳೆ ಮುಂದುವರಿಯಲಿದ್ದು, ನ. 14ರ ವೇಳೆಗೆ ಕಡಿಮೆಯಾಗುವ ಸಾಧ್ಯತೆ ಇದೆ. ತಮಿಳುನಾಡು ಮಾತ್ರವಲ್ಲದೆ ಇಂದು ದಕ್ಷಿಣ ಭಾರತದ ಬೇರೆ ರಾಜ್ಯಗಳಲ್ಲೂ ಮಳೆ ಹೆಚ್ಚಿನ ಮಳೆಯಾಗಲಿದೆ. ತಮಿಳುನಾಡು, ಪುದುಚೇರಿ, ಕೇರಳ, ಆಂಧ್ರಪ್ರದೇಶ ಮತ್ತು ರಾಯಲಸೀಮಾದಲ್ಲಿ ಇಂದಿನಿಂದ ನವೆಂಬರ್ 13ರವರೆಗೆ ಆರೆಂಜ್ ಅಲರ್ಟ್‌ ನೀಡಲಾಗಿದೆ.

Leave a Comment

Your email address will not be published. Required fields are marked *