Ad Widget .

ಹಾಲು, ಮೊಸರಿನ ದರದಲ್ಲಿ ₹3 ಏರಿಕೆ| ಗ್ರಾಹಕರಿಗೆ ಕತ್ತರಿ, ಹೈನುಗಾರರಿಗೆ ಬಂಪರ್ ಕೊಡುಗೆ

ಸಮಗ್ರ ನ್ಯೂಸ್: ಪ್ರತಿ ಲೀಟರ್ ನಂದಿನಿ ಹಾಲಿನ ದರದಲ್ಲಿ 3 ರೂಪಾಯಿ ಏರಿಸಲು ಕೆಎಂಎಫ್ ನಿರ್ಧರಿಸಿದೆ. ಹಾಗೂ ಮೊಸರಿನ ಬೆಲೆಯೂ ಕೂಡ 3 ರೂಪಾಯಿ ಏರಿಕೆ ಮಾಡಲಾಗಿದೆ.

Ad Widget . Ad Widget .

ಕರ್ನಾಟಕ ಹಾಲು ಒಕ್ಕೂಟವು ನಡೆಸಿದ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ನಿರ್ಣಯ ಕೈಗೊಳ್ಳಲಾಗಿದೆ.

Ad Widget . Ad Widget .

ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡುವುದು ಹಾಗೂ ರೈತರ ಆರ್ಥಿಕ ಅಭಿವೃದ್ಧಿಗಾಗಿ ಪ್ರತಿ ಲೀಟರ್ ಹಾಲು ಹಾಗೂ ಮೊಸರಿನ ಮೇಲೆ 3 ರೂಪಾಯಿ ಹೆಚ್ಚಳ ಮಾಡುವುದಕ್ಕೆ ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಸಮೃದ್ಧಿ ಹಾಲಿನ ದರ ಪ್ರತಿ ಲೀಟರ್‌ಗೆ 48 ರೂಪಾಯಿ ಇಂದ 51 ರೂಪಾಯಿಗೆ ಹೆಚ್ಚಳವಾಗಿದೆ. ಟೋನ್ಡ್‌ ಹಾಲಿನ ದರ 37ರೂಪಾಯಿ ಇಂದ 40 ರೂಪಾಯಿಗೆ ಏರಿಸಲಾಗಿದೆ. ಸ್ಪೆಷಲ್‌ ಹಾಲಿನ ದರ 43 ರೂಪಾಯಿಯಿಂದ 46 ರೂಪಾಯಿಗೆ ಏರಿಸಲಾಗಿದೆ. ಇನ್ನು ಮೊಸರಿನ ಬೆಲೆಯನ್ನು 45 ರೂಪಾಯಿ ಇಂದ 48 ರೂಪಾಯಿಗೆ ಏರಿಸಲಾಗಿದೆ. ಈ ಪರಿಷ್ಕೃತ ದರ ನಾಳೆಯಿಂದಲೇ ಜಾರಿಗೆ ಬರಲಿದೆ. ನಂದಿನಿ ಟೋನ್ಡ್‌ ಹಾಲಿನ ದರ ಪ್ರಸ್ತುತ 37 ರೂಪಾಯಿ ಇದ್ದು ಪರಿಷ್ಕೃತ ದರ 40 ರೂಪಾಯಿ ಮಾಡಲಾಗಿದೆ. ಮೊಸರು ಪ್ರತಿ ಕೆ.ಜಿಯ ಪ್ರಸ್ತುತ 45 ರೂಪಾಯಿ ಇದ್ದು ಪರಿಷ್ಕೃತ ದರ 48 ರೂಪಾಯಿ ಮಾಡಲಾಗಿದೆ.

ಇತ್ತೀಚೆಗೆ ರಾಜ್ಯದ ಹಲವು ಕಡೆ ರೈತರು ಪ್ರತಿಭಟನೆ ನಡೆಸಿದ್ದು, 15 ದಿನದೊಳಗೆ ದರ ಪರಿಷ್ಕರಣೆ ಮಾಡುವಂತೆ ಒತ್ತಾಯಿಸಿದ್ದರು. ಚರ್ಮಗಂಟು ರೋಗದಿಂದ 1 ಲಕ್ಷ ಲೀಟರ್, ಅತಿವೃಷ್ಟಿಯಿಂದಾಗಿ 3 ಲಕ್ಷ ಲೀಟರ್ ಹಾಲಿನ ಉತ್ಪಾದನೆ ಕುಂಠಿತವಾಗಿದ್ದು, ಖಾಸಗಿ ಕಂಪನಿಗಳು ರಾಜ್ಯದಲ್ಲಿ ಹಾಲು ಸಂಗ್ರಹವಾಗಿ ನೆರೆ ರಾಜ್ಯದಲ್ಲಿ ಮಾರಾಟ ಮಾಡುತ್ತಿವೆ.

ಈ ಪೈಪೋಟಿಯಿಂದ ಆರ್ಥಿಕ ಹೊರೆಯಾಗುತ್ತಿತ್ತು. ರೈತರು ಕೂಡ ನಷ್ಟ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ರೈತರನ್ನು ದೃಷ್ಟಿಯಲ್ಲಿಟ್ಟುಕೊಂಡು ಹಾಲಿನ ದರ ಪರಿಷ್ಕರಣೆ ಮಾಡಲಾಗಿದೆ ಎಂದು ಕೆಎಂಎಫ್ ಪ್ರಕಟಣೆಯಲ್ಲಿ ತಿಳಿಸಿದೆ.

Leave a Comment

Your email address will not be published. Required fields are marked *