Ad Widget .

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸಂಚು ರೂಪಿಸಿ ಹತ್ಯೆ ಮಾಡಿದ ಪಿಎಫ್ಐ! ಮಾಹಿತಿ ಬಹಿರಂಗ

ಸಮಗ್ರ ನ್ಯೂಸ್: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್ ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಯಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್ಐಎ) ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ವಿಚಾರಣೆಯಲ್ಲಿ ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಮತ್ತೊಂದು ಕೊಲೆ ನಡೆಸಿ ಸಮಾಜದಲ್ಲಿ ಭಯ ಹುಟ್ಟಿಸುವ ಉದ್ದೇಶವನ್ನು ಪಿಎಫ್ ಐ ಹೊಂದಿತ್ತು.

Ad Widget . Ad Widget . Ad Widget .

ಕೆಲವೇ ದಿನಗಳಲ್ಲಿ ಪಿಎಫ್ ಐ ನಾಯಕರು ಮತ್ತು ಕಾರ್ಯಕರ್ತರು ಸಂಚು ರೂಪಿಸಿ ಪ್ರವೀಣ್ ನೆಟ್ಟಾರು ಟಾರ್ಗೆಟ್ ಮಾಡಿದ್ದರು ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪ್ರವೀಣ್ ನೆಟ್ಟಾರು ಪ್ರಕರಣ ಸಂಬಂಧ ಎನ್ ಐಎ ಶಹೀದ್ ಬೆಳ್ಳಾರೆಯನ್ನು ಬಂಧಿಸಿದೆ. ಈ ಮೂಲಕ ಬಂಧಿತರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ. ತನಿಖೆ ಪ್ರಗತಿಯಲ್ಲಿದ್ದು, ಕೆಲವು ಪ್ರಮುಖರ ಬಂಧನಕ್ಕಾಗಿ ಶೋಧ ಮಾಡಲಾಗುತ್ತಿದೆ.

Leave a Comment

Your email address will not be published. Required fields are marked *