Ad Widget .

ಜೆಡಿಎಸ್ ನಲ್ಲಿ ಮತ್ತೊಂದು ವಿಕೆಟ್ ಪತನ|ಪಕ್ಷಕ್ಕೆ ಇಬ್ಬರು ರಾಜೀನಾಮೆ ಸಲ್ಲಿಕೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದ್ದು, ಜೆಡಿಎಸ್ ಮಾಜಿ ಶಾಸಕ ಹೆಚ್. ನಿಂಗಪ್ಪ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

Ad Widget . Ad Widget .

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂಗೆ ಹೆಚ್.ನಿಮಗಪ್ಪ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಇಟ್ಟಿದ್ದಕ್ಕೆ ಮಾಜಿ ಶಾಸಕ ಹೆಚ್.ನಿಂಗಪ್ಪ ಅಸಮಾಧಾನಗೊಂಡಿದ್ದರು. ಹೀಗಾಗಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆಯಲ್ಲಿ ಉಲ್ಲೇಖಿಸಿದ್ದಾರೆ.

Ad Widget . Ad Widget .

2006 ರಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾಗಿದ್ದ ಹೆಚ್. ನಿಂಗಪ್ಪ, 2013 ರಲ್ಲಿ ಜೆಡಿಎಸ್ ಬಿಟ್ಟು ಕೆಜೆಪಿಯಿಂದ ಸ್ಪರ್ಧಿಸಿದ್ದರು. ಬಳಿಕ 2018 ರಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದರು. ಇದೀಗ ಮತ್ತೆ ಜೆಡಿಎಸ್ ಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಗೆ ಸೇರುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *