Ad Widget .

ಬಂಟ್ವಾಳ: ಸಿಡಿಲಿಗೆ 16 ವರ್ಷದ ಬಾಲಕ ಬಲಿ

ಸಮಗ್ರ ನ್ಯೂಸ್: ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಹೃದಯವಿದ್ರಾವಕ ಘಟನೆ ನ.14 ರ ರಾತ್ರಿ ಕರಿಯಂಗಳ ಗ್ರಾಮದ ಸಾಣೂರು ಪದವಿನಲ್ಲಿ ನಡೆದಿದೆ.

Ad Widget . Ad Widget .

ಸಾಣೂರುಪದವು ಗಣೇಶ್ ಆದಿದ್ರಾವಿಡ ಅವರ ಪುತ್ರ ಕಾರ್ತಿಕ್ (16) ಮೃತಪಟ್ಟ ಬಾಲಕ.

Ad Widget . Ad Widget .

ರಾತ್ರಿ 9 ರ ಸುಮಾರಿಗೆ ಊಟ ಮುಗಿಸಿ ಮಲಗಿದ್ದು, 9.30 ರ ಸುಮಾರಿಗೆ ಜೋರಾಗಿ ಸಿಡಿಲು ಸಹಿತ ಮಳೆ ಬಂದು, ಮಲಗಿದ್ದವರಿಗೆ ಕರೆಂಟ್ ಶಾಕ್ ಹೊಡೆದ ಅನುಭವವಾಗಿದೆ .ಈ ವೇಳೆ ಮನೆಮಂದಿ ಹಾಲ್ ಗೆ ಓಡಿ ಬಂದಿದ್ದು, ಅದರೆ ಕಾರ್ತಿಕ್ ಏಳದೆ ಇದ್ದಾಗ, ಆತನನ್ನು ತಕ್ಷಣವೇ ಕೈಕಂಬದ ಕ್ಲಿನಿಕ್ ಗೆ ಕರೆತರಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆ ಗೆ ಸಾಗಿಸಿದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *