Ad Widget .

ಕರಾವಳಿಯ ದೈವಸ್ಥಾನಗಳಿಗೆ ಭೇಟಿ ನೀಡಿದ ಸಪ್ತಮಿ ಗೌಡ

ಸಮಗ್ರ ನ್ಯೂಸ್: ಕಾಂತಾರ ಚಿತ್ರ 50ನೇ ದಿನ ಪೂರೈಸಿದ ದಾಖಲೆ ಬರೆಯುತ್ತಿರುವ ಬೆನ್ನಲ್ಲೇ ಕಾಂತಾರದ ನಟಿ ಲೀಲಾ ಇದೀಗ ಕರಾವಳಿಯ ದೈವಸ್ಥಾನಗಳಿಗೆ ಭೇಟಿ ನೀಡಿದರು.

Ad Widget . Ad Widget .

ಮಂಗಳೂರಿನ ಕಲ್ಲಾಪು ಬಳಿಯ ಬುರ್ದುಗೋಳಿಯ ಗುಳಿಗ ದೈವಸ್ಥಾನ, ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳ ಹಾಗೂ ಈ ಭಾಗದ ಕೆಲವು ದೈವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.

Ad Widget . Ad Widget .

ಕುಟುಂಬ ಸದಸ್ಯರು, ಸಿನಿಮಾದ ಸಹನಟರು ಹಾಗೂ ಸ್ನೇಹಿತರೊಂದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬುರ್ದುಗೋಳಿ ಆದಿಸ್ಥಳ ಕ್ಷೇತ್ರದ ಸಮಿತಿ ಅಧ್ಯಕ್ಷರಾದ ವಿಶ್ವನಾಥ್ ನಾಯ್ಕ್ ಅವರು ಸಪ್ತಮಿ ಗೌಡ ಅವರನ್ನ ಬರಮಾಡಿ ಕ್ಷೇತ್ರದ ಐತಿಹ್ಯವನ್ನ ತಿಳಿಸಿದರು.

ಈ ವೇಳೆ ಮಾತನಾಡಿದ ಸಪ್ತಮಿ ಗೌಡ, ವಿಶ್ವದಾದ್ಯಂತ ಕಾಂತಾರ ಸದ್ದು ಮಾಡುತ್ತಿದೆ. ಸಿನಿಮಾ ನಿರ್ಮಾಣದ ವೇಳೆ ಕರಾವಳಿ ಭಾಗದ ಆಚರಣೆ, ಸಂಸ್ಕೃತಿ, ದೈವಾರಾಧನೆ ಬಗ್ಗೆ ನಾನು ತಿಳಿದುಕೊಂಡೆ. ಇತ್ತೀಚಿಗೆ ನಡೆದ ವೈಯಕ್ತಿಕ ಘಟನೆಯೊಂದು ದೈವಗಳ ಬಗ್ಗೆ ಹುಟ್ಟಿದ ನಂಬಿಕೆ ಗಟ್ಟಿಯಾಗುವಂತೆ ಮಾಡಿದೆ ಎಂದಿದ್ದಾರೆ.

Leave a Comment

Your email address will not be published. Required fields are marked *