ಸಮಗ್ರ ನ್ಯೂಸ್: ಕೊರೊನಾ ಹಿನ್ನೆಲೆ ಕಳೆದೆರಡು ವರ್ಷಗಳಿಂದ ನಿರ್ಬಂಧಿಸಲಾಗಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿನ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ.
ಸಚಿವ ಎಸ್ ಅಂಗಾರ ನೇತೃತ್ವದಲ್ಲಿ ಚಂಪಾ ಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನ ಪಾಲಿಸಿಕೊಂಡು ಸೇವೆಗೆ ಅವಕಾಶ ನೀಡಲು ತೀರ್ಮಾನಿಸಲಾಯಿತು.
ಕೊರೊನಾ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ನಿರ್ಬಂಧಿಸಲಾಗಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿನ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲು ಸಮ್ಮತಿಸಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ನವೆಂಬರ್ 21ರಿಂದ ನಡೆಯಲಿರುವ ಚಂಪಾ ಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು
ಚೌತಿ, ಪಂಚಮಿ, ಷಷ್ಠಿ ದಿನದಂದು ಮಧ್ಯಾಹ್ನ ಮಹಾಪೂಜೆ ಬಳಿಕ ಜಿಲ್ಲಾಧಿಕಾರಿಗಳ ನಿರ್ದೇಶನ ಪಾಲಿಸಿಕೊಂಡು ಸೇವೆಗೆ ಅವಕಾಶ ನೀಡಲು ತೀರ್ಮಾನಿಸಲಾಯಿತು. ಬೀದಿ ಉರುಳು ಸೇವೆ ಮಾಡುವವರಿಗೆ ಲಕ್ಷ ದೀಪೋತ್ಸವ ದಿನದಂದು ರಾತ್ರಿ ರಥೋತ್ಸವದ ಬಳಿಕ ಸಂಜೆ 5ರಿಂದ ಬೆಳಗ್ಗೆ 6 ಗಂಟೆವರೆಗೆ ಅವಕಾಶ ನೀಡಲು ಸಲಹೆ ವ್ಯಕ್ತವಾಯಿತು.