ಸುಬ್ರಹ್ಮಣ್ಯ: ಹೊಳೆಯಲ್ಲಿ ಮುಳುಗಿ‌ ಇಬ್ಬರು ಸಾವು

ಸಮಗ್ರ‌ ನ್ಯೂಸ್: ಹೊಳೆಯಲ್ಲಿ ಮುಳುಗಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ ಘಟನೆ‌ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ಯೇನೆಕಲ್ಲು ಬಳಿಯಲ್ಲಿ ‌ನಡೆದಿದೆ. ಮೃತಪಟ್ಟವರನ್ನು ಧರ್ಮಪಾಲ ಪರಮಲೆ (46ವ.) ಮತ್ತು ಬೆಳ್ಯಪ್ಪ ಚಳ್ಳಂಗಾರು, ಚೊಕ್ಕಾಡಿ (49ವ.) ಎಂದು ಗುರುತಿಸಲಾಗಿದೆ.

. Ad Widget . Ad Widget

ಧರ್ಮಪಾಲರು ಕೆಲವು ಸಮಯಗಳಿಂದ ಸುಬ್ರಹ್ಮಣ್ಯ ಗ್ರಾ.ಪಂ.ನಲ್ಲಿ ಕಸವಿಲೇವಾರಿ ಘಟಕದಲ್ಲಿ ದಿನಕೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೊಳೆಯಲ್ಲಿದ್ದ ಪಂಪಿನ ಫೂಟ್ ವಾಲ್ ತೆಗೆಯಲು ನೀರಿಗಿಳಿದಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ‌ ಮುಳುಗಿರಬಹುದೆಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಇಬ್ಬರ ಶವಗಳನ್ನು ನೀರಿನಿಂದ ಮೇಲಕ್ಕೆತ್ತಲಾಗಿದ್ದು, ಇನ್ನಷ್ಟೇ ಶವ ಪರೀಕ್ಷೆ ನಡೆಯಬೇಕಾಗಿದೆ ಎಂದು ತಿಳಿದುಬಂದಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *