Ad Widget .

69 ಸಹಕಾರ ಸಪ್ತಾಹದಲ್ಲಿ‌ ಉಡುಪಿ‌ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೊಕ್| ಸಚಿವ ಎಸ್.ಅಂಗಾರರಿಗೆ ಆಮಂತ್ರಣವೇ ಇಲ್ಲ…!

ಸಮಗ್ರ ನ್ಯೂಸ್: 69ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಬಂದರು, ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರರನ್ನು ಕೈ ಬಿಟ್ಟಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

Ad Widget . Ad Widget .

ಮಂಗಳೂರಿನ ಕರಾವಳಿ ಮೈದಾನದಲ್ಲಿ ನಡೆದ ರಾಜ್ಯಮಟ್ಟದ ಈ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಸೇರಿದಂತೆ ಹಲವು ಪ್ರಮುಖ ಗಣ್ಯರು ಭಾಗವಹಿಸಿದ್ದರು. ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ಸಹಕಾರ ಇಲಾಖೆ ಮತ್ತು ರಾಜ್ಯ ಸಹಕಾರ ಮಹಾಮಂಡಳದ ಸಂಯೋಜನೆಯಲ್ಲಿ ಬೃಹತ್ ಕಾರ್ಯಕ್ರಮ ನಡೆದಿತ್ತು.

Ad Widget . Ad Widget .

ಇಂಧನ, ಸಂಸ್ಕೃತಿ ಇಲಾಖೆ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಸಂಸದ ನಳಿನ್ ಕುಮಾರ್, ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ ದೇವೇಗೌಡ, ದ.ಕ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್, ಹಾಗೂ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್, ಯು.ಟಿ ಖಾದರ್, ಭರತ್ ಶೆಟ್ಟಿ, ಸೇರಿದಂತೆ ಹಲವರಿಗೆ ಆಹ್ವಾನವಿದ್ದು ಬಹುತೇಕರು‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಆದರೆ ಪ್ರಭಾವಿ ನಾಯಕ ಹಾಗೂ ಸಚಿವರಾಗಿರುವ ಎಸ್.ಅಂಗಾರರಿಗೆ ಈ ಕಾರ್ಯಕ್ರಮಕ್ಕೆ ಆಹ್ವಾನವಿರಲಿಲ್ಲ. ಒಬ್ಬ ಪ್ರಭಾವಿ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಸ್.ಅಂಗಾರರನ್ನು ಕಾರ್ಯಕ್ರಮದಿಂದ ಕೈಬಿಟ್ಟಿದ್ದು, ಕರಾವಳಿ ಬಿಜೆಪಿಯೊಳಗೆ ಎಲ್ಲವೂ ಸರಿಯಿಲ್ಲ ಎಂಬುದನ್ನು ಸಾರಿ‌ಹೇಳುತ್ತಿದೆ ಎಂದು ‌ಕಾರ್ಯಕ್ರಮಕ್ಕೆ ಹೋಗಿ ಬಂದ ಹಲವು ಸಹಕಾರಿಗಳು ಮಾತನಾಡುತ್ತಿದ್ದರು.‌

ಚುನಾವಣೆಯ ಹೊಸ್ತಿಲಲ್ಲಿ ಒಂದು ಕಾಲದಲ್ಲಿ ಜಿಲ್ಲೆಯಲ್ಲಿ ಬಿಜೆಪಿಯ ಮಾನ ಉಳಿಸಿದ ಪ್ರಭಾವಿ ನಾಯಕನನ್ನು ಮಹತ್ವದ ಕಾರ್ಯಕ್ರಮದಲ್ಲಿ ಕೈ ಬಿಟ್ಟಿರುವುದು ಕರಾವಳಿಯ ಕಾರ್ಯಕರ್ತರಲ್ಲಿ ಹಾಗೂ ಅಭಿಮಾನಿಗಳಲ್ಲಿ ಅಸಮಾಧಾನ ಉಂಟಾಗುವಂತೆ ಮಾಡಿದೆ. ಇದಕ್ಕೆ ಆಯೋಜಕರು ಮತ್ತು ಸಚಿವರೇ ಉತ್ತರಿಸಬೇಕಿದೆ.

Leave a Comment

Your email address will not be published. Required fields are marked *