Ad Widget .

ಪಾಕಿಸ್ತಾನಕ್ಕೆ ಜಿಂದಾಬಾದ್ ಕೂಗಿದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ಬೆಂಗಳೂರಿನ ಮಾರತ್ತಹಳ್ಳಿಯ ಕಾಲೇಜೊಂದರಲ್ಲಿ ಯುವಕ-ಯುವತಿಯರು ಪಾಕಿಸ್ತಾನ್​ ಜಿಂದಾಬಾದ್​ ಎಂದು ಘೋಷಣೆ ಕೂಗಿದ್ದಾರೆ! ಮಾರತ್ತಹಳ್ಳಿ ನಗರದ ಠಾಣಾ ವ್ಯಾಪ್ತಿಯಲ್ಲಿ ಬರುವ ನ್ಯೂ ಹಾರಿಜನ್ ಕಾಲೇಜಿನಲ್ಲಿ ಈ ಹುಚ್ಚಾಟ ನಡೆದಿದೆ.

Ad Widget . Ad Widget .

ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಪಾಕಿಸ್ತಾನ್ ಜಿಂದಬಾದ್ ಎಂದು ಯುವಕ-ಯುವತಿಯರು ಕೂಗಾಡಿದ್ದಾರೆ. ಘಟನೆಯ ಬಗ್ಗೆ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸದ್ಯ ವಿಡಿಯೋದಲ್ಲಿರುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘೋಷಣೆ ಕೂಗಿರುವ ಇಬ್ಬರನ್ನೂ ಮಾರತ್ತಹಳ್ಳಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ.

Ad Widget . Ad Widget .

ಕಾಲೇಜಿನಲ್ಲಿ ಕಲ್ಚರಲ್ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ತಮಾಷೆಗಾಗಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ವಿದ್ಯಾರ್ಥಿಗಳು ಕೂಗಿದ್ದಾರೆ. ವಿದ್ಯಾರ್ಥಿಗಳನ್ನು ರಿಯಾ , ಆರ್ಯನ್,ದಿನಕರ್ ಎಂದು ಗುರುತಿಸಲಾಗಿದ್ದು ಸದ್ಯ ಈ ಕೇಸನ್ನ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಈಗ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಪ್ರಕರಣವನ್ನೂ ದಾಖಲಿಸಿಕೊಂಡಿದ್ದಾರೆ. ಸದ್ಯ ಮೂವರನ್ನೂ ಮಾರತ್ತಹಳ್ಳಿ ಪೊಲೀಸರು ತೀವ್ರ ವಿಚಾರಣೆಗೆ ಒಳ ಪಡಿಸುತ್ತಿದ್ದಾರೆ.

ಸದ್ಯ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಸಸ್ಪೆಂಡ್ ಮಾಡಲಾಗಿದ್ದು, ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.ಐಪಿಸಿ 153 – ಜನಾಂಗೀಯ ದ್ವೇಷಕ್ಕೆ ಪ್ರಚೋದನೆ ಹಾಗೂ 505(1)B – ದೇಶದ ವಿರುದ್ಧ ಕೆಲಸ ಮಾಡಲು ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಘೋಷಣೆ ಕೂಗುವ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಮೂವರನ್ನು ಸಸ್ಪೆಂಡ್ ಮಾಡಿದ್ದ ಕಾಲೇಜು ಆಡಳಿತ ಮಂಡಳಿ, ಬಳಿಕ ಮಾರತ್ತಹಳ್ಳಿ ಠಾಣೆಗೆ ದೂರು ನೀಡಿತ್ತು.

Leave a Comment

Your email address will not be published. Required fields are marked *