ಸುಳ್ಯ: ಅನಾರೋಗ್ಯದಿಂದಾಗಿ ಯುವತಿ ಸಾವು

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಯುವತಿಯೋರ್ವಳು ಸಾವನ್ನಪ್ಪಿದ ಘಟನೆ ಬೆಳ್ಳಾರೆಯ ಐವತ್ತೊಕ್ಲು ಗ್ರಾಮದ ಪಡ್ಪಿನಂಗಡಿ ಸಮೀಪದ ಜನತಾ ಕಾಲೋನಿಯಲ್ಲಿ ನಡೆದಿದೆ.

Ad Widget ... ..

ಉಮೇಶ ಮತ್ತು ಪದ್ಮಾವತಿ ದಂಪತಿಗಳ ಪುತ್ರಿ ಸುಪ್ರೀತಾ (19) ಮೃತ ಯುವತಿ. ಇವರು ನಿಂತಿಕಲ್ಲ್ ನಲ್ಲಿ ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದು, ನ.14 ರಂದು ಮನೆಯಲ್ಲಿದ್ದ ವೇಳೆ ಹಠಾತ್ ಅನಾರೋಗ್ಯಕ್ಕೆ ಒಳಗಾದರು. ಅವರನ್ನು ಮೊದಲು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Ad Widget

ಇನ್ನು ಯುವತಿಯ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದ್ದರಿಂದ ನ.15 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇದೀಗ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *