Ad Widget .

ಬೆಳಗಾವಿ: ನವಿಲು ತೀರ್ಥ ಜಲಾಶಯದಲ್ಲಿ ತಾಯಿ ಮಕ್ಕಳ ಶವ ಪತ್ತೆ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಮಕ್ಕಳು ಹಾಗೂ ತಾಯಿ ಶವ ಪತ್ತೆಯಾಗಿದೆ.

Ad Widget . Ad Widget .

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಮಕ್ಕಳು ಹಾಗೂ ತಾಯಿ ಶವ ಪತ್ತೆಯಾಗಿದೆ. ತನುಜಾ ಪರಸಪ್ಪ ಗೋಡಿ(32), ಸುದೀಪ್(4), ರಾಧಿಕಾ(3) ಶವವಾಗಿ ಸಿಕ್ಕವರು.

Ad Widget . Ad Widget .

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ‌ ಚುಂಚನೂರು ಗ್ರಾಮದ ನಿವಾಸಿ ತನುಜಾ ಮಕ್ಕಳನ್ನ ಕೊಂದು ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಸದ್ಯ ಸವದತ್ತಿ ತಾಲೂಕು ಆಸ್ಪತ್ರೆಗೆ ಶವಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Comment

Your email address will not be published. Required fields are marked *