Ad Widget .

ಕೊಟ್ಟಿಗೆಹಾರ: ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣ|ಶವ ಇರಿಸಿ ಪ್ರತಿಭಟನೆ ನಡೆಸಿದವರ ಮೇಲೆ ಲಾಠಿಚಾರ್ಜ್

ಸಮಗ್ರ ನ್ಯೂಸ್ : ಚಿಕ್ಕಮಗಳೂರು ಜಿಲ್ಲೆಯ ಹುಲ್ಲೆಮನೆ ಕುಂದೂರಿನಲ್ಲಿ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿ ಹುಲ್ಲೆಮನೆ ಕುಂದೂರುನಲ್ಲಿ ಮಹಿಳೆಯ ಶವ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಲಾಠಿಚಾರ್ಜ್ ಮಾಡಲಾಯಿತು.

Ad Widget . Ad Widget .

ನ.20 ರ ಮುಂಜಾನೆ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದರು ಈ ಕಾರಣ ಗ್ರಾಮಕ್ಕೆ ತೆರಳಿದ ಶಾಸಕ ಎಂ.ಪಿ.ಕುಮಾರಸ್ವಾಮಿಯ ನಡೆಯನ್ನು ಸ್ಥಳೀಯರು ಪ್ರಶ್ನೆ ಮಾಡಿದ್ದರು. ಈ ವೇಳೆ ಗ್ರಾಮಸ್ಥರು ಹಾಗೂ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿಲ್ಲದೆ ಶಾಸಕರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಪ್ರಶ್ನೆ ಮಾಡಿದ ಜನರ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ.

Ad Widget . Ad Widget .

ಪೊಲೀಸರ ಕ್ರಮಕ್ಕೆ ಗ್ರಾಮಸ್ಥರು ಖಂಡನೆ ವ್ಯಕ್ತಪಡಿಸಿದ್ದು ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಈ ವೇಳೆ ಆ
ಗ್ರಾಮದಿಂದ ಶಾಸಕರನ್ನು ಜೀಪ್ ನಲ್ಲಿ ಕರೆತಂದ ಘಟನೆಯು ನಡೆದಿದೆ.

Leave a Comment

Your email address will not be published. Required fields are marked *