Ad Widget .

ಮಂಗಳೂರು ಸ್ಪೋಟ ಪ್ರಕರಣದ ಶಂಕಿತನಿಗೆ ಮಲೆನಾಡು ನಂಟು| ತುಂಗಾ ತೀರದಲ್ಲಿ ನಡೆದಿತ್ತು‌ ಬಾಂಬ್ ಸ್ಪೋಟದ ಕಸರತ್ತು

ಸಮಗ್ರ ನ್ಯೂಸ್: ಮಂಗಳೂರಿನ ಪಂಪ್ ವೇಲ್ ನಲ್ಲಿ ಆಟೋದಲ್ಲಿ ಕುಕ್ಕರ್ ಸ್ಫೋಟಗೊಂಡ ಪ್ರಕರಣದ ಆರೋಪಿ ಶಾರೀಖ್ ನನ್ನು ಪೊಲೀಸರು ಬಂಧಿಸಿದ್ದು, ಈತ ಶಿವಮೊಗ್ಗದಲ್ಲಿ ಈ ಹಿಂದೆ ಉಗ್ರರನ್ನು ಬೆಂಬಲಿಸಿ ಪೋಸ್ಟರ್ ಅಂಟಿಸುವುದು ಹಾಗೂ ತುಂಗಾ ನದಿಯಲ್ಲಿ ಬಾಂಬ್ ಸ್ಫೋಟದ ಪ್ರಯೋಗ ನಡೆಸಿದವನು ಎಂಬುದು ತಿಳಿದು ಬಂದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ಶಾರೀಕ್‌ ಬಂಧಿತ ಆರೋಪಿಯಾಗಿದ್ದು, ಈತ ಶಿವಮೊಗ್ಗದ ತುಂಗಾ ನದಿಯಲ್ಲಿ ಸ್ಫೋಟದ ಅಭ್ಯಾಸ ನಡೆಸಿದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ. ಇದೀಗ ಮಂಗಳೂರು ಸ್ಫೋಟ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾನೆ.

Ad Widget . Ad Widget . Ad Widget .

ತುಂಗಾ ನದಿಯ ತಟದಲ್ಲಿ ಬಾಂಬ್‌ ಸ್ಫೋಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಸೆಪ್ಟೆಂಬರ್‌ 19 ರಂದು ಸಿದ್ದೇಶ್ವರ ನಗರ ನಿವಾಸಿಯಾದ ಸೈಯದ್ ಯಾಸಿನ್‌(21) ಮತ್ತು ಮಂಗಳೂರಿನ ಮಾಜ್‌ ಮುನೀರ್‌ನನ್ನು(22) ಬಂಧಿಸಿದ್ದರು. ಆದರೆ ಈ ಪ್ರಕರಣದ ಪ್ರಮುಖ ಎ1 ಆರೋಪಿಯಾಗಿದ್ದ ಶಾರೀಕ್‌ ನಾಪತ್ತೆಯಾಗಿದ್ದ.

ಯಾಸಿನ್‌ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪದವೀಧರನಾಗಿದ್ದರೆ ಮಾಜ್‌ ಮುನೀರ್‌ ಮೆಕ್ಯಾನಿಕ್‌ ಓದಿದ್ದ. ಹೀಗಾಗಿ ಇವರು ಬಾಂಬ್‌ ತಯಾರಿಸುತ್ತಿದ್ದರು. ಯಾಸಿನ್‌ ರಿಲೆ ಸರ್ಕ್ಯೂಟ್‌, ಟೈಮರ್‌ ಆನ್‌ಲೈನ್‌ನಲ್ಲಿ ಖರೀದಿಸಿದ್ದ. ಅಲ್ಯೂಮಿನಿಯಂ ಪೌಡರ್‌ ಸರ್ಚ್‌ ಮಾಡಿದ್ದ ಆದರೆ ಸಿಕ್ಕಿರಲಿಲ್ಲ. ಬ್ಯಾಟರಿ, ಸ್ವಿಚ್‌ ಜೊತೆ ಸ್ಥಳೀಯವಾಗಿ ಸಿಗುವ ಸ್ಫೋಟಕವನ್ನು ಖರೀದಿ ಮಾಡಿ ಆಗಸ್ಟ್‌ 15ರ ಬಳಿಕ ಗುರುಪುರ-ಪುರಲೆ ಸಮೀಪದ ಅಡಿಕೆ ತೋಟಗಳಿಂದ ಆವೃತವಾದ ತುಂಗಾ ನದಿಯ ದಂಡೆಯಲ್ಲಿ ಪರೀಕ್ಷೆ ಮಾಡಿದ್ದರು.

ದೊಡ್ಡ ಪ್ರಮಾಣದಲ್ಲಿ ಸ್ಫೋಟ ನಡೆದಿರಲಿಲ್ಲ. ಆದರೆ ಈ ಸ್ಫೋಟದ ವಿಡಿಯೋವನ್ನು ಮೊಬೈಲಿನಲ್ಲಿ ಸೆರೆ ಹಿಡಿಯಲಾಗಿತ್ತು. ಈ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಬಾಂಬ್‌ ಸ್ಫೋಟಿಸಲು ತಯಾರಿ ನಡೆಸುತ್ತಿದ್ದರು. ಭಾರತದ ರಾಷ್ಟ್ರ ಧ್ವಜವನ್ನು ಇವರು ಸುಟ್ಟಿದ್ದರು ಅದರ ವೀಡಿಯೋವನ್ನು ಇವರು ಚಿತ್ರೀಕರಿಸಿದ್ದರು.

Leave a Comment

Your email address will not be published. Required fields are marked *