ವೋಟರ್ ಐಡಿ ಹಗರಣ; ಪ್ರಮುಖ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಸಹೋದರ ಕೆಂಪೇಗೌಡನನ್ನು ಬಂಧಿಸಲಾಗಿದೆ.

Ad Widget ... ..

ವೋಟರ್ ಐಡಿ ಪರಿಷ್ಕರಣಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಗೆ ಸಂಬಂಧಿಸಿದ ಹಣಕಾಸಿನ ವ್ಯವಹಾರ ನೋಡಿಕೊಳ್ಳುತ್ತಿದ್ದ ಕೆಂಪೇಗೌಡನನ್ನು ಬಂಧಿಸಲಾಗಿದೆ. ತುಮಕೂರಿನ ಸಮೀಪ ಪೊಲೀಸರು ಕಾರ್ಯಾಚರಣೆ ನಡೆಸಿ ಕೆಂಪೇಗೌಡನನ್ನು ಬಂಧಿಸಿದ್ದಾರೆ. ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಬಂಧನಕ್ಕೆ ತೀವ್ರ ಹುಡುಕಾಟ ನಡೆಸಲಾಗಿದೆ ಎಂದು ಹೇಳಲಾಗಿದೆ.

Ad Widget

ಅಕ್ರಮವಾಗಿ ಮತದಾರರ ಮಾಹಿತಿಯನ್ನು ಸಂಗ್ರಹಿಸಿದ್ದ ಕಾರಣ ಚಿಲುಮೆ ಸಂಸ್ಥೆಗೆ ನೀಡಲಾಗಿದ್ದ ಗುತ್ತಿಗೆ ರದ್ದಾಯಿತು ಎಂದು ಬಿಜೆಪಿ ತಿಳಿಸಿದ್ದು, ಕಾಂಗ್ರೆಸ್ ಕೇವಲ ರಾಜಕೀಯ ಪ್ರೇರಿತ ಆರೋಪ ಮಾಡುತ್ತಿದೆ ಎಂದು ದೂರಿದೆ.

Leave a Comment

Your email address will not be published. Required fields are marked *