ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ನ.22ರಿಂದ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನೆಲೆ ನ.22 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ,ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು , ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ನ.22 ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget

ರಾಜ್ಯದಲ್ಲಿ ಚಳಿ ಕೂಡ ಏರಿಕೆಯಾಗಿದ್ದು, ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಚಳಿ ಜೋರಾಗಿದೆ. ಸದ್ಯ ಚಳಿ ಜೊತೆಗೆ ಮಳೆ ಕೂಡ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Comment

Your email address will not be published. Required fields are marked *