ಸಮಗ್ರ ನ್ಯೂಸ್ : ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಕೇಳಿಬಂದಿದ್ದ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನೊಂದ ಯುವತಿ ಮೊಹಮದ್ ರೌಫ್ ಸೇರಿದಂತೆ ಮೂವರ ವಿರುದ್ಧ ಹರಿಹರಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
“ನಾನು ಕಾರ್ಕಳದ ಮೀನಾಕ್ಷಿ ಕಾಲೇಜಿನಲ್ಲಿ ಓದುತ್ತಿದ್ದಾಗ ಸಾಮಾಜಿಕ ಜಾಲತಾಣದಲ್ಲಿ ಮಹಮದ್ ರೌಫ್ ಸ್ನೇಹಿತನಾಗಿದ್ದ. ತದನಂತರ ಭೇಟಿಯಾಗಿ ಮಾತನಾಡಿದ್ದೇವು. ಊಟಕ್ಕೆ ಹೋಗೋಣ ಎಂದು ಊಟ ಮಾಡಿದ ಬಳಿಕ ಕುಡಿಯಲು ಜ್ಯೂಸ್ ಕೊಟ್ಟಿದ್ದನು. ಜ್ಯೂಸ್ ಕುಡಿದ ಬಳಿಕ ಏನು ನಡೆಯಿತು ಎಂದು ನನಗೆ ಗೊತ್ತಿಲ್ಲ. ಸ್ವಲ್ಪ ಹೊತ್ತಿನ ಬಳಿಕ ನನ್ನನ್ನು ಕರೆತಂದು ಹಾಸ್ಟೆಲ್ ಬಳಿ ಬಿಟ್ಟು ಹೋಗಿದ್ದರು. ಮರುದಿನ ಮತ್ತೆ ಕರೆದಾಗ ನಾನು ಬರುವುದಿಲ್ಲ ಎಂದು ಹೇಳಿದ್ದಕ್ಕೆ ನನ್ನ ಖಾಸಗಿ ಫೋಟೋಗಳನ್ನು ನನಗೆ ಕಳುಹಿಸಿ, ಬರದಿದ್ದರೆ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‍ಲೋಡ್ ಮಾಡುತ್ತೇನೆ ಎಂದು ಹೆದರಿಸುತ್ತಿದ್ದನು ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಹೀಗೆ, ಕಳೆದ ಮೂರು ವರ್ಷಗಳಿಂದ ನನಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ. ತಂಪು ಪಾನೀಯದಲ್ಲಿ ಅಮಲು ಪದಾರ್ಥವನ್ನು ಬೆರೆಸಿ ಬಲವಂತವಾಗಿ ಕುಡಿಸಿ ನನ್ನ ಫೋಟೋ ಹಾಗೂ ವಿಡಿಯೋ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ತಾಳಿ ಕಟ್ಟುವ ರೀತಿಯ ಫೋಟೋ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ” ಎಂದು ದೂರಿನಲ್ಲಿ ದೂರಿದ್ದಾಳೆ.
ಈಗ ಮೊಹಮದ್ ರೌಫ್ ವಿದೇಶದಲ್ಲಿ ಕೂತು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುತ್ತಿದ್ದಾನೆ. ಇದರಿಂದ ನನ್ನ ಹಾಗೂ ಮನೆಯವರ ಮಾನಸಿಕ ನೆಮ್ಮದಿ ಹಾಳಾಗಿದೆ. ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿರುವ ಫೋಟೋಗಳನ್ನ ಡಿಲೀಟ್ ಮಾಡಿಸಿ ಮೊಹಮದ್ ರೌಫ್, ಇರ್ಫಾನ್ ಹಾಗೂ ಸೈಫ್ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯುವತಿ ಮನವಿ ಮಾಡಿದ್ದಾಳೆ.