ಕಾರ್ಕಳ: ಕಣಿವೆಗೆ ಬಿದ್ದ ಕಾರು – ಓರ್ವ ಮೃತ್ಯು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಣಿವೆಗೆ ಉರುಳಿ ಬಿದ್ದು ಓರ್ವ ಸಾವನಪ್ಪಿದ ಘಟನೆ ಕಾರ್ಕಳ ತಾಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆಯಲ್ಲಿ ನ.21 ರ ಬೆಳಿಗ್ಗೆ ಸಂಭವಿಸಿದೆ.

Ad Widget ... ..

ಉಡುಪಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿ ವೈಷ್ಣವ್ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ. ಇನ್ನೂ ಕಾರಿನಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

Ad Widget

ಉಚ್ಚಿಲದಲ್ಲಿ ತಮ್ಮದೇ ಮನೆಯಲ್ಲಿ ಬಾಡಿಗೆಗೆ ಇರುವ ಕುಟುಂಬದ ಸದಸ್ಯರೊಟ್ಟಿಗೆ ಬೆಂಗಳೂರಿಗೆ ತಿರುಗಾಡಲು ಹೋಗಿ ಬರುವ ವೇಳೆ ಕಾರ್ಕಳದಿಂದ ಬೆಳ್ಮಣ್‌ ಕಡೆಗೆ ಸಾಗುತ್ತಿದ್ದ ಕಿಯಾ ಕಾರು ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿ ಬಿದ್ದಿದೆ.

ಇನ್ನು ಘಟನೆಯಲ್ಲಿ ಇನ್ನಿಬ್ಬರು ಮಹಿಳೆಯರೂ ಗಂಭೀರ ಗಾಯಗೊಂಡಿದ್ದು, ಕಾರ್ಕಳ ಸಿಟಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *