Ad Widget .

ವಿಟ್ಲ: ಮುಸ್ಲಿಂ ಯುವಕರೊಂದಿಗೆ ಹಿಂದೂ ಹುಡುಗಿ ಗುಡ್ಡದಲ್ಲಿ ಸಿಕ್ಕಿಬಿದ್ದ ಪ್ರಕರಣಕ್ಕೆ ತಿರುವು

ಸಮಗ್ರ ನ್ಯೂಸ್: ಮುಸ್ಲಿಂ ಯುವಕರೊಂದಿಗೆ ಹಿಂದೂ ಅಪ್ರಾಪ್ತ ಹುಡುಗಿ ಅಳಕಮಜಲು ಸಮೀಪದ ನಿನ್ನಿಕಲ್ಲು ಗುಡ್ಡದಲ್ಲಿ ಪತ್ತೆಯಾದ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ.

Ad Widget . Ad Widget .

ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಮುಸ್ಲಿಂ ಯುವಕರು, ಒಬ್ಬಳು ಮುಸ್ಲಿಂ ಯುವತಿ ಹಾಗೂ ಹಿಂದೂ ಅಪ್ರಾಪ್ತ ಹುಡುಗಿ ನಿನ್ನಿ ಕಲ್ಲು ಎಂಬಲ್ಲಿ ಸ್ಥಳೀಯರ ಕೈಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದು ಇದೀಗ ಪೊಲೀಸ್ ಠಾಣಾ ಮೆಟ್ಟಿಲೇರಿದೆ.
ಈ ಕುರಿತು ಹಿಂದೂ ಹುಡುಗಿಯ ಪೋಷಕರು ವಿಟ್ಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

Ad Widget . Ad Widget .

ದೂರಿನಲ್ಲಿ ಏನಿದೆ..?
ಕಬಕ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಸರಕಾರದ ವತಿಯಿಂದ ನಡೆಸುವ ಕಂಪ್ಯೂಟರ್ ಶಿಕ್ಷಣ ಪಡೆಯಲು ತೆರಳಿದ್ದು ಹಿಂದೂ ಹುಡುಗಿಯನ್ನು ಅಲ್ಲಿಂದ ಇಬ್ಬರು ಯುವಕರಾದ ಮಹಮ್ಮದ್‌ ಶಾಕೀರ್‌ ಮತ್ತು ಅಪ್ರಾಪ್ತ ಬಾಲಕನೋರ್ವ ಪುಸಲಾಯಿಸಿ ಅಪಹರಣ ಮಾಡಿದ್ದಾರೆ. ಇಡ್ಕಿದು ಗ್ರಾಮದ ನಿನ್ನಿಕಲ್ಲು ಎಂಬಲ್ಲಿಗೆ ಯಾವುದೋ ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ವಿಚಾರವನ್ನು ಮಗಳು ಸಂಜೆ 5.30 ಗಂಟೆಗೆ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾಳೆ. ಪೋಷಕರು ನಿನ್ನಿಕಲ್ಲು ಎಂಬಲ್ಲಿನ ಎತ್ತರದ ಗುಡ್ಡ ಪ್ರದೇಶದ ಕಡೆಗೆ ಹೋಗಿ ನೋಡಿದಾಗ ಅಲ್ಲಿ ಇಬ್ಬರು ಹುಡುಗರು ಇರುವುದನ್ನು ಕಂಡು ತನ್ನ ಮಗಳನ್ನು ಹೆಸರು ಕೂಗಿ ಕರೆದಾಗ ಅವರಿಬ್ಬರು ಅಲ್ಲಿಂದ ಓಡಿ ಹೋಗಿರುತ್ತಾರೆ. ನಂತರ ಮಗಳನ್ನು ಮನೆಗೆ ಕರೆದುಕೊಂಡು ಹೋಗಿ ಈ ಬಗ್ಗೆ ಸಮಾಲೋಚನೆ ನಡೆಸಿ ದೂರು ನೀಡಿದ್ದಾಗಿ ಉಲ್ಲೇಖವಾಗಿದೆ.

Leave a Comment

Your email address will not be published. Required fields are marked *