Ad Widget .

ಲಘು ವಿಮಾನ ಪತನ; 8 ಮಂದಿ ಸಾವು

ಸಮಗ್ರ ನ್ಯೂಸ್: ಲಘು ವಿಮಾನವೊಂದು ವಸತಿ ಪ್ರದೇಶದಲ್ಲಿ ಪತನಗೊಂಡು ಎಂಟು ಮಂದಿ ಮೃತಪಟ್ಟ ಘಟನೆ ಕೊಲಂಬಿಯಾದಲ್ಲಿ ನಡೆದಿದೆ. ಇಲ್ಲಿನ ಮೆಡೆಲಿನ್​​ನ ಒಲಯಾ ಹೆರೆರಾ ವಿಮಾನ ನಿಲ್ದಾಣದಿಂದ ಟೇಕ್​ಆಫ್​ ಆಗಿದ್ದ ಈ ವಿಮಾನದಲ್ಲಿ ಇಬ್ಬರು ಪೈಲೆಟ್​ಗಳು ಮತ್ತು ಆರು ಮಂದಿ ಪ್ರಯಾಣಿಕರು ಇದ್ದರು.

Ad Widget . Ad Widget .

ಏರ್​ಪೋರ್ಟ್​ನಿಂದ ಹೊರಟ ಕೆಲವೇ ಹೊತ್ತಲ್ಲಿ, ಸಮೀಪದ ವಸತಿ ಪ್ರದೇಶದಲ್ಲಿದ್ದ ಮನೆಯೊಂದಕ್ಕೆ ಡಿಕ್ಕಿ ಹೊಡೆದು ಪತನಗೊಂಡಿದೆ. ಆ ಮನೆಯ ಕೊನೇ ಫ್ಲೋರ್​ ಧ್ವಂಸಗೊಂಡಿದೆ. ಅದೃಷ್ಟಕ್ಕೆ ಮನೆಯಲ್ಲಿ ಇದ್ದವರಿಗಾಗಲೀ, ಪತನಗೊಂಡ ಸ್ಥಳದಲ್ಲಿ ಇದ್ದ ಇನ್ನಿತರರಿಗಾಗಲೀ ಯಾವುದೇ ತೊಂದರೆಯಾಗಿಲ್ಲ ಎಂದು ವರದಿಯಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *