ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 2 ಡಿಜಿಟಲ್ ಆರ್ಟಿಸ್ಟ್, ಯೋಗ ಥೆರಪಿಸ್ಟ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 30, 2022 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅಪ್ಲೈ ಮಾಡಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಮಾಹಿತಿ: ಯೋಗ ಥೆರಪಿಸ್ಟ್-1, ಡಿಜಿಟಲ್ ಆರ್ಟಿಸ್ಟ್-1
ವಿದ್ಯಾರ್ಹತೆ: ಯೋಗ ಥೆರಪಿಸ್ಟ್- ಎಂಎಸ್ಸಿ,
ಡಿಜಿಟಲ್ ಆರ್ಟಿಸ್ಟ್-ಬಿಎಸ್ಸಿ, ಎಂಎಸ್ಸಿ
ಹುದ್ದೆಯ ಮಾಹಿತಿ: ಯೋಗ ಥೆರಪಿಸ್ಟ್-1,
ಡಿಜಿಟಲ್ ಆರ್ಟಿಸ್ಟ್-1
ವಯೋಮಿತಿ: ಯೋಗ ಥೆರಪಿಸ್ಟ್- ಗರಿಷ್ಠ 40 ವರ್ಷ, ಡಿಜಿಟಲ್ ಆರ್ಟಿಸ್ಟ್- ಗರಿಷ್ಠ 40 ವರ್ಷ
ವಯೋಮಿತಿ ಸಡಿಲಿಕೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಸ್ಕಿಲ್ ಟೆಸ್ಟ್, ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನವೆಂಬರ್ 30, 2022ಕ್ಕೆ ಮುನ್ನ ಕಳುಹಿಸಬೇಕು.
ನಿರ್ದೇಶಕರು,
ನಿಮ್ಹಾನ್ಸ್,
P.B.No.2900,
D.R. ಕಾಲೇಜು ಅಂಚೆ,
ಹೊಸೂರು ರಸ್ತೆ,
ಬೆಂಗಳೂರು-560029
ಅರ್ಜಿಯ ಸಾಫ್ಟ್ ಕಾಪಿಯನ್ನು ಇ-ಮೇಲ್ ಐಡಿ [email protected] ಗೆ ಕಳುಹಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/11/2022
ಅರ್ಜಿ ಸಲ್ಲಿಸಲು ಕೊನೆ ದಿನ: 30/11/2022