Ad Widget .

ಗೃಹಸಚಿವರನ್ನು ಹಿಗ್ಗಾಮುಗ್ಗ ತರಾಟೆಗೆತ್ತಿಕೊಂಡ ಶಾಸಕ ಎಂ.ಪಿ ಕುಮಾರಸ್ವಾಮಿ| ನನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆಂದು ಆರೋಪ

ಸಮಗ್ರ ನ್ಯೂಸ್: ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ದ ಬಿಜೆಪಿ ಶಾಸಕರೇ ಅಸಮಾಧಾನ ಹೊರಹಾಕಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧವೇ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ.

Ad Widget . Ad Widget .

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ದ ಆಡಳಿತ ಪಕ್ಷದ ಮೂಡಿಗೆರೆ ಶಾಸಕ ಎಂ.ಪಿ‌.ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ನಾನೊಬ್ಬ ದಲಿತ ಶಾಸಕ ಎಂಬ ಕಾರಣದಿಂದ ಮೊನ್ನೆ ನನ್ನ ಕ್ಷೇತ್ರದಲ್ಲಿ ನಡೆದ ಘಟನೆ ಸಂಬಂಧ ಸೌಜನ್ಯಕ್ಕೂ ಮಾತನಾಡಿಸಿ ವಿಷಾಧ ಹೇಳುವುದು ಮಾಡಿಲ್ಲ ಎಂದು ಹೇಳಿದರು.

Ad Widget . Ad Widget .

ನಾನು ದೂರು ಕೊಡಲಿಲ್ಲ. ನಾನು ಕುಮಾರಸ್ವಾಮಿ ಅಲ್ಲ.ನಾನೊಬ್ಬ ಶಾಸಕ ಆದರೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇದುವರೆಗೂ ನನ್ನ ಮಾತನಾಡಿಸುವ ಕೆಲಸ ಮಾಡ್ತಿಲ್ಲ.ಸೌಜನ್ಯಕ್ಕೂ ಕರೆದು ಏನಾಯ್ತು ಅಂತ ಕೇಳಿಲ್ಲ ಜನಪ್ರತಿನಿಧಿಗಳಿಗೆ ಹೀಗೆ ಆದರೆ ಜನರ ಪರಿಸ್ಥಿತಿ ಎಲ್ಲಿಗೆ ಹೋಗಲಿದೆ ಎಂದರು.

ನಾನು ಆನೆ ಸಾಕಲು ಆಗುತ್ತಾ ಗೃಹ ಸಚಿವರು ಸಂಪೂರ್ಣವಾಗಿ ನನ್ನ ನಿರ್ಲಕ್ಷ್ಯ ಮಾಡಿದ್ದಾರೆ.ಇದುವರೆಗೂ ಒಂದ್ ಪೋನ್ ಮಾಡಿ ಏನಾಯ್ತು ಅಂತ ಕೇಳಿಲ್ಲ ಎಂದು ನೇರವಾಗಿ ಗೃಹ ಸಚಿವರ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು.

Leave a Comment

Your email address will not be published. Required fields are marked *