ಕರುನಾಡಿನಲ್ಲಿ ಕನ್ನಡಿಗನಿಗೇ ಉದ್ಯೋಗದಲ್ಲಿ ಆದ್ಯತೆ

ಸಮಗ್ರ ನ್ಯೂಸ್: ಕೊನೆಗೂ ಕನ್ನಡಿಗರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 70% ರಷ್ಟು ಕೆಲಸ ನೀಡುವ ಉದ್ದೇಶದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಅನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಅನುಮೋದನೆ ಪಡೆಯಲು ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ.

Ad Widget ... ..

ರಾಜ್ಯದಲ್ಲಿ ಉದ್ಯಮ ಚಟುವಟಿಕೆ ಆರಂಭಿಸುವ ಪ್ರತಿ ಸಂಸ್ಥೆಯು ಸ್ಥಳೀಯ ಕನ್ನಡಿಗರಿಗೆ ಶೇ. 70 ರಷ್ಟು ಉದ್ಯೋಗ ನೀಡುವುದು ಕಡ್ಡಾಯ. ಉಲ್ಲಂಘಿಸಿದ ಉದ್ದಿಮೆಗೆ ರಾಜ್ಯ ಸರ್ಕಾರದ ಸೌಲಭ್ಯ ಹಾಗೂ ರಿಯಾಯಿತಿಗಳನ್ನು ಕಡಿತಗೊಳಿಸುವ ಕುರಿತು ಈ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.

Ad Widget

ಇದರಿಂದಾಗಿ ರಾಜ್ಯದಲ್ಲಿ ಸ್ಥಾಪನೆಯಾಗುವ ಎಲ್ಲಾ ಉದ್ದಿಮೆಗಳು ಕನ್ನಡಿಗರನ್ನು ಮೊದಲ ಆದ್ಯತೆಯಲ್ಲಿ ಉದ್ಯೋಗಕ್ಕೆ ನೇಮಿಸಿಕೊಳ್ಳಬೇಕಿದೆ. ಈ ವಿಧೇಯಕದಿಂದ ಹಲವು ನಿರುದ್ಯೋಗಿಗಳಿಗೆ ಲಾಭವಾಗುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *