ಸಮಗ್ರ ನ್ಯೂಸ್: ಕಾಂತಾರ ಚಿತ್ರ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಗಳಿಸಿದೆ. ದೈವಾರಾಧನೆಕುರಿತು ಚಿತ್ರದಲ್ಲಿ ಅದ್ಬುತವಾಗಿ ತೋರಿಸಲಾಗಿದೆ. ಈ ಸಿನಿಮಾ ಸಕ್ಸಸ್ ಆದ ಬಳಿಕ ಗುಳಿಗ ಆಚರಣೆಗಳು ಹೆಚ್ಚು ಪ್ರಚಲಿತವಾಗಿದೆ.
ಇದೀಗ ಕೆಲವರು ಇದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ದೈವದ ಹೆಸರಲ್ಲಿ ಅನೇಕರು ಹಣ ಮಾಡಲು ಹೊರಟಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳು ಕೆಲವೊಂದು ಪೋಸ್ಟ್ಗಳು ಹರಿದಾಡುತ್ತಿದೆ. ಅಂಥವರಿಗೆ ತುಳುನಾಡ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು, ಮೈಸೂರು ಭಾಗದ ಜನರು ದೈವನಂಬಿಕೆಗಳನ್ನು ಮುರಿದು, ಪ್ರಚಾರಕ್ಕಾಗಿ, ದುಡ್ಡು ಮಾಡುವುದಕ್ಕಾಗಿ ಅಲ್ಲಲ್ಲಿ ದೈವದ ಕಟ್ಟೆಗಳನ್ನು ಸ್ಥಾಪಿಸಿ ಗೂಗಲ್ ಪೇ ಮಾಡಿ, ಫೋನ್ ಪೇ ಮಾಡಿ ಎನ್ನುತ್ತಿದ್ದಾರೆ.
ದುಡ್ಡು ಸಿಗುತ್ತದೆ ಎಂಬ ಕಾರಣಕ್ಕಾಗಿ ಅಲ್ಲಿ ಹೋಗಿ ನೇಮ ಕಟ್ಟುವವರಿಗೆ, ತಾಸೆ ಬ್ಯಾಂಡ್ ಸೆಟ್‌ನವರಿಗೆ, ಮಧ್ಯಸ್ಥ, ಮುಕ್ಕಾಲ್ದಿ ಹಾಗೂ ಯಾರೆಲ್ಲ ಇಲ್ಲಿ ತೊಡಗಿಸಿಕೊಳ್ಳುತ್ತಾರೆಯೋ ಅವರೆಲ್ಲರಿಗೂ ಮುಂದೆ ನಮ್ಮ ಊರಿನ ಯಾವುದೇ ದೈವಸ್ಥಾನ, ಮನೆಗಳಲ್ಲಿ ನೇಮದ ಕೊಡಿಯಡಿಯಲ್ಲಿ ಅವಕಾಶ ನೀಡುವುದಿಲ್ಲ.
ತುಳುನಾಡ ದೈವಾರಾಧಕರು ಎಚ್ಚರಿಕೆ ನೀಡಿದ ಫೋಟೋ ಒಂದು ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದ್ರೆ ಈ ಬಗ್ಗೆ ಯಾವುದೇ ಸ್ಪಷ್ಟನೆ ದೊರೆತಿಲ್ಲ.