ಬೆಳ್ತಂಗಡಿ: ನಿಯಂತ್ರಣ ತಪ್ಪಿ ಬೈಕ್ ಪಲ್ಟಿ; ಸವಾರ ಸಾವು

ಸಮಗ್ರ ನ್ಯೂಸ್ : ಬೈಕ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ರಾತ್ರಿ ಮುಂಡಾಜೆ ಗ್ರಾಮದ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಮೀಪ ಬಳಿ ಸಂಭವಿಸಿದೆ.

Ad Widget ... ..

ಮೃತ ವ್ಯಕ್ತಿ ಅಣಿಯೂರು ನಿವಾಸಿಯಾಗಿರುವ ಪ್ರದೀಪ್ ಗೌಡ(22) ಎಂದು ಗುರುತಿಸಲಾಗಿದೆ. ಇವರು ರಾತ್ರಿಯ ವೇಳೆ ತಮ್ಮ ಸಂಬಂಧಿಕರಲ್ಲಿಗೆ ಹೋಗುತ್ತಿದ್ದಾಗ ಇವರೇ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಹೊರಗೆ ಚಲಿಸಿ ಮನೆಯೊಂದರ ಗೇಟಿಗೆ ಡಿಕ್ಕಿ ಹೊಡೆದಿದೆ .

Ad Widget

ಅಪಘಾತದ ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಸ್ಥಳೀಯರು ಕೂಡಲೇ ಉಜಿರೆಯ ಆಸ್ಪತ್ರೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ ಆ ವೇಳೆಗೆ ಅವರು ಮೃತ ಪಟ್ಟಿದ್ದರು.

ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *