ದಸರಾ ಗಜಪಡೆಯ ಗೋಪಾಲಸ್ವಾಮಿ ಇನ್ನಿಲ್ಲ| ಕಾಡಾ‌ನೆಯ ಪುಂಡಾಟಕ್ಕೆ ನಾಡಾನೆ ಬಲಿ

ಸಮಗ್ರ ನ್ಯೂಸ್: ನಾಡಹಬ್ಬ ಮೈಸೂರು ದಸರಾದ ಜಂಬೂ ಸವಾರಿಯಲ್ಲಿ ಪಾಲ್ಗೊಂಡಿದ್ದ ಗಜಪಡೆಯ ಗೋಪಾಲಸ್ವಾಮಿ (40) ಆನೆ ಕಾಡಾನೆ ದಾಳಿಗೆ ಬಲಿಯಾಗಿದೆ.

Ad Widget ... ..

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹನಗೋಡು ಹೋಬಳಿ ಬಳಿ ಕಾಡಾನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಗೋಪಾಲಸ್ವಾಮಿ ಆನೆ ಬುಧವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ.

Ad Widget

ಗೋಪಾಲಸ್ವಾಮಿ ಆನೆಯನ್ನು ಮೇಯಲು ಬಿಟ್ಟಿದ್ದ ವೇಳೆ ಕೊಡಗಿನ ಭಾಗದಲ್ಲಿ ಪುಂಡಾಟ ನಡೆಸುತ್ತಿದ್ದ ಕಾಡಾನೆ (ಅಯ್ಯಪ್ಪ) ನಡುವೆ ಗುದ್ದಾಟ ನಡೆದಿದೆ. ಅಯ್ಯಪ್ಪ ಆನೆಯ ದಾಳಿಗೆ ಸಿಲುಕಿದ ಗೋಪಾಲಸ್ವಾಮಿಗೆ ಕಾಲು ಮುರಿದಿದೆ. ಈ ವೇಳೆ ದಂತದಿಂದ ಅಯ್ಯಪ್ಪ ಮನ ಬಂದಂತೆ ತಿವಿದು ದಾಳಿ ನಡೆಸಿದ್ದರಿದ್ದರಿಂದ ತೀವ್ರ ರಕ್ತಸ್ರಾವಕ್ಕೊಳಗಾದ ಆನೆ ಚಿಂತಾಜನಕ ಸ್ಥಿತಿಗೆ ತಲುಪಿತು.

ಗೋಪಾಲಸ್ವಾಮಿಗೆ ನೀಡಿದ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Comment

Your email address will not be published. Required fields are marked *