Ad Widget .

ನಾನು ಬಳಸಿದೆ ಎನ್ನಲಾದ ಪದದಿಂದ ನನಗೇ ನೋವಾಗಿದೆ – ಎಚ್.ಡಿ ಕುಮಾರಸ್ವಾಮಿ

ಸಮಗ್ರ ನ್ಯೂಸ್: ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ.

Ad Widget . Ad Widget .

ಆ ಮಾತನ್ನು ಹಿಂಪಡೆಯುತ್ತೇನೆಂದು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರು ಹೇಳಿದ್ದಾರೆ. ಕುಮಾರಸ್ವಾಮಿಯವರು ಆಕ್ರೋಶಗೊಂಡು ಶ್ರೀನಿವಾಸಪುರದ ಹಾಲಿ ಶಾಸಕ ಹಾಗೂ ಮಾಜಿ ಸ್ಪೀಕರ್​ ರಮೇಶ್​ ಕುಮಾರ್ ಅವರ ಬಗ್ಗೆ ಮಾತನಾಡುತ್ತಾ ಕೆಟ್ಟ ಭಾಷೆಯಲ್ಲಿ ನಿಂದಿಸಿದ್ದರು.

Ad Widget . Ad Widget .

ಇದರ ವಿಡಿಯೋ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿತ್ತು. ಕುಮಾರಸ್ವಾಮಿಯವರು ಬಳಸಿದ ಪದಗಳಿಗೆ ಟೀಕೆಗಳು ವ್ಯಕ್ತವಾಗ ತೊಡಗಿದವು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ.

Leave a Comment

Your email address will not be published. Required fields are marked *