Ad Widget .

ಮಂಗಳೂರು ಸ್ಪೋಟ ಪ್ರಕರಣ| ಬಯಲಾಯ್ತು ಮತ್ತೊಂದು ಸ್ಪೋಟಕ ಮಾಹಿತಿ| ಉಗ್ರರ ಟಾರ್ಗೆಟ್ ನಲ್ಲಿ ಕರಾವಳಿಯ ಮೂರು ದೇವಾಲಯಗಳು

ಸಮಗ್ರ ನ್ಯೂಸ್: ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿಗಳು ಲಭ್ಯವಾಗುತ್ತಿವೆ.

Ad Widget . Ad Widget .

ಇದೀಗ ಉಗ್ರರ ಮತ್ತೊಂದು ಕರಾಳ ಮುಖ ಬಯಲಾಗಿದ್ದು, ‘ಹಿಂದೂ’ ದೇವಾಲಯಗಳ ಸ್ಪೋಟಕ್ಕೆ ಉಗ್ರರು ಸ್ಕೆಚ್ ಹಾಕಿದ್ದರು ಎಂಬುದು ಗೊತ್ತಾಗಿದೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯ , ಮಂಗಳಾದೇವಿ ದೇವಾಲಯ, ಮಂಜುನಾಥ ಸ್ವಾಮಿ ದೇವಾಲಯಕ್ಕೂ ಉಗ್ರರು ಸ್ಕೆಚ್ ಹಾಕಿದ್ದರು ಎಂಬ ಮಾಹಿತಿ ಬಯಲಾಗಿದೆ.

Ad Widget . Ad Widget .

ಶಾರೀಖ್ ಮೊಬೈಲ್ ತನಿಖೆ ನಡೆಸಿದ ಪೊಲೀಸರಿಗೆ ಈ ವಿಚಾರ ಗೊತ್ತಾಗಿದೆ. ಅದೇ ರೀತಿ ಮಂಗಳೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣವನ್ನು ಕೂಡ ಸ್ಪೋಟಿಸುವ ಸ್ಕೆಚ್ ಹಾಕಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ದೇಗುಲ ಮಾತ್ರವಲ್ಲದೇ ಸಾರ್ವಜನಿಕ ಸ್ಥಳಗಳನ್ನು ಕೂಡ ಸ್ಪೋಟಿಸುವ ಸ್ಕೆಚ್ ಹಾಕಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಶಿವನ ಡಿಪಿ ಬೆನ್ನತ್ತಿದ ಪೊಲೀಸರಿಗೆ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಕರಾವಳಿ ಭಾಗದ ಮೂರು ದೇವಾಲಯಗಳನ್ನು ಸ್ಪೋಟಿಸುವ ಸ್ಕೆಚ್ ಹಾಕಲಾಗಿತ್ತು ಎಂಬ ಸ್ಪೋಟಕ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.

Leave a Comment

Your email address will not be published. Required fields are marked *