ಸಮಗ್ರ ನ್ಯೂಸ್: ಐದು ವರ್ಷಗಳ ಹಿಂದೆ ನಡೆದ ಪರೇಶ್ ಮೇಸ್ತ ಸಾವಿನ ಪ್ರಕರಣವನ್ನು ಕೊಲೆಯೆಂದು ಬಿಂಬಿಸಿ ತನ್ನ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದ ಬಿಜೆಪಿ ವಿರುದ್ಧ ಕಾಂಗ್ರೆಸ್ ತಿರುಗಿಬಿದ್ದಿದ್ದು, ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್ ಹಾಕಿರುವ ಹಿನ್ನೆಲೆಯಲ್ಲಿ ಇದೀಗ ಬಿಜೆಪಿಗೆ ಚುರುಕು ಮುಟ್ಟಿಸಲು ಮುಂದಾಗಿದೆ.
ಮೇಸ್ತಾ ಸಾವಿನ ಪ್ರಕರಣದ ಸಿಬಿಐ ಬಿ ರಿಪೋರ್ಟ್ ಮುಂದಿಟ್ಟು ಸಮಾವೇಶ ನಡೆಸಲಾಗುವುದು. ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಂಡಿದ್ದು, ಹೀಗಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಜನಜಾಗೃತಿ ಸಮಾವೇಶ ಹಮ್ಮಿಕೊಂಡಿದೆ.
ಜಾಗೃತಿ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಯು.ಟಿ. ಖಾದರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.