ಉಡುಪಿ:ರಕ್ತದೊತ್ತಡ ಕಡಿಮೆಯಾಗಿ‌ ಯುವತಿ ಸಾವು

ಸಮಗ್ರ ನ್ಯೂಸ್: ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ರೋಸ್ ಕಾರ್ಯಕ್ರಮದ ವೇಳೆ ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು ಯುವತಿ ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ.

Ad Widget ... ..

ಇವರು ನಿನ್ನೆ ರಾತ್ರಿ ಕೊಳಲಗಿರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಸಮಾರಂಭಕ್ಕೆ ತೆರಳಿದ್ದರು.

Ad Widget

ಅಲ್ಲಿ 8.30ರ ಸುಮಾರಿಗೆ ಏಕಾಏಕಿಯಾಗಿ ರಕ್ತದ ಒತ್ತಡ ಕಡಿಮೆಯಾದ ಪರಿಣಾಮ ಜೋಸ್ನಾ ಅವರು ಅಲ್ಲೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಜೋಸ್ನಾ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *