ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಎಡಿಜಿಪಿ ಅಲೋಕ್ ಕುಮಾರ್ ಕೂಡಾ ಟಾರ್ಗೆಟ್? ಪೋಸ್ಟರ್ ವೈರಲ್; ತನಿಖೆ ಚುರುಕು

ಸಮಗ್ರ ನ್ಯೂಸ್: ಮಂಗಳೂರು ನಗರದ ಕಂಕನಾಡಿ ಸಮೀಪದಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ವಿವಿಧ ಆಯಾಮಗಳಲ್ಲಿ ಮುನ್ನಡೆಸಲಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್ ಒಂದು ವೈರಲ್ ಆಗುತ್ತಿದೆ. ವೈರಲ್ ಆಗುತ್ತಿರುವ ಪೋಸ್ಟ್ ಗೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

. Ad Widget . Ad Widget

ಇನ್ಸ್ಟಾಗ್ರಾಂನಲ್ಲಿ ಒಂದು ಸಂಘಟನೆ ಏಕಾಏಕಿ ಪೋಸ್ಟ್ ಹಾಕಿಕೊಂಡಿದ್ದು ಸ್ವತಃ ಈ ಕೃತ್ಯದ ಹೊಣೆ ಹೆಗಲೇರಿಸಿಕೊಂಡಿದೆ. ವೈರಲ್ ಆಗುತ್ತಿರುವ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಅವರು ‘ನಾವು ಸಂಘಟನೆ ಮತ್ತು ಆ ಪೋಸ್ಟ್ ಕುರಿತ ಸತ್ಯಾಸತ್ಯತೆ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಪರಿಶೀಲನೆಯ ನಂತರ ತನಿಖೆಯ ಫಲಿತಾಂಶವನ್ನು ಬಯಲು ಮಾಡುತ್ತೇವೆ’ ಎಂದು ಹೇಳಿದ್ದಾರೆ.

. Ad Widget . . Ad Widget . Ad Widget

ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್‌ನಲ್ಲಿ ‘ನಮ್ಮ ಗುರಿ ಇದ್ದದ್ದು ಕದ್ರಿ ದೇವಸ್ಥಾನ. ಆದರೆ ನಿರ್ದಿಷ್ಟ ಸಮಯಕ್ಕೆ ಗುರಿ ತಲುಪಲು ಸಾಧ್ಯವಾಗಲಿಲ್ಲ ಎಂದು ಉಲ್ಲೇಖವಿದೆ ಎನ್ನಲಾಗಿದೆ.

ಇವತ್ತು ನಮ್ಮ ಸಹೋದರನ ಪರಿಸ್ಥಿತಿ ನೊಡಿ ಸಂಭ್ರಮಿಸುತ್ತಿರುವ ಅದರಲ್ಲೂ ವಿಶೇಷವಾಗಿ ಎಡಿಜಿಪಿ ಅಲೋಕ್ ಕುಮಾರ್ ಅವರ ಸಂತೋಷವು ಅಲ್ಪಕಾಲದ್ದಾಗಿದೆ. ನೀವು ಕೂಡಾ ನಮ್ಮ ಟಾರ್ಗೆಟ್ ಲೀಸ್ಟ್‌ನಲ್ಲಿ ಇದ್ದೀರಿ’ ಎಂದು ಉಲ್ಲೇಖ ಮಾಡಲಾಗಿತ್ತು.

Leave a Comment

Your email address will not be published. Required fields are marked *