ಮಂಗಳೂರು: ಭಿನ್ನ ಕೋಮಿನ ಲವ್ ಬರ್ಡ್ಸ್ ಗೆ ಹಲ್ಲೆ; ಯುವಕನಿಂದ ದೂರು

ಸಮಗ್ರ ನ್ಯೂಸ್: ಬಸ್ ನಲ್ಲಿ ಹಿಂದೂ ಯುವತಿ ಜೊತೆ ಬರುತ್ತಿದ್ದ ಅನ್ಯಕೋಮಿನ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಹಲ್ಲೆಗೊಳಗಾದ ಯುವಕ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Ad Widget ... ..

ಮಂಗಳೂರಿನ ನಂತೂರು ಸರ್ಕಲ್ ಬಳಿ ನಿನ್ನೆ(ನ.24) ಘಟನೆ ನಡೆದಿದೆ. ಕಾರ್ಕಳದಿಂದ ಬಸ್ ನಲ್ಲಿ ಬರುತ್ತಿದ್ದ ಅನ್ಯಕೋಮಿನ ಯುವಕ ಮತ್ತು ಹಿಂದೂ ಯುವತಿಯನ್ನು ನಗರದ ನಂತೂರಿನಲ್ಲಿ ಬಸ್ಸನ್ನು ತಡೆದು ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಯುವಕ ಮತ್ತು ಯುವತಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದು ಹಲ್ಲೆಗೊಳಗಾದ ಯುವಕ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಇನ್ನು ಈ ಘಟನೆಗೆ ಸಂಬಂದಿಸಿದಂತೆ ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯಿಸಿದ್ದು, ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.

Ad Widget

ಆದರೆ ಈ ಕುರಿತಂತೆ ಭಜರಂಗದಳ ಕಾರ್ಯಕರ್ತರು ಇದೊಂದು ಲವ್ ಜಿಹಾದ್ ಪ್ರಕರಣವೆಂದು ಹೇಳಿದ್ದು, ಖಂಡನೆ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *