ಸಮಗ್ರ ನ್ಯೂಸ್: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಶನಿವಾರ ದೊಡ್ಡ ಮಟ್ಟದ ಕುಸಿತ ಕಂಡಿದೆ. ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆ ನಿರಂತರವಾಗಿ ಕುಸಿಯುತ್ತ ಸಾಗಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ ಬೆಲೆ ಇಳಿಕೆಯಾಗಿದೆ.
ಬೇಡಿಕೆ ಕಡಿಮೆಯಾಗಿರುವ ಹಿನ್ನೆಲೆ ಅಡಿಕೆ ದರ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 50,049 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ.