Ad Widget .

ಮತ್ತೊಂದು ಭೀಬತ್ಸ ಪ್ರಕರಣಕ್ಕೆ ಸಾಕ್ಷಿಯಾದ ದೆಹಲಿ| ವ್ಯಕ್ತಿಯ ದೇಹವನ್ನು 5 ಪೀಸ್ ಮಾಡಿ ಪ್ರಿಡ್ಜ್ ನಲ್ಲಿಟ್ಟ ತಾಯಿ-ಮಗ

ಸಮಗ್ರ ನ್ಯೂಸ್: ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ನಡುವೆ ಇದೀಗ ಅವರು ಮತ್ತೊಂದು ಇಂತಹದೇ ಕೊಲೆ ಪ್ರಕರಣವನ್ನು ಪತ್ತೆ ಮಾಡಿದ್ದಾರೆ. ಪೂರ್ವ ದೆಹಲಿಯಲ್ಲಿ ಒಬ್ಬ ವ್ಯಕ್ತಿಯ ಕತ್ತರಿಸಿದ ದೇಹದ ಭಾಗಗಳನ್ನು ಅವರು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಬ್ರಾಂಚ್ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Ad Widget . Ad Widget .

ದೆಹಲಿಯ ಪಾಂಡವನಗರದ ಪೂನಂ ಮತ್ತು ಮಗನ ದೀಪಕ್ ಹಾಗೂ ಮೃತರ ಹೆಸರು ಅಂಜನ್ ದಾಸ್ ಎಂದು ಹೇಳಲಾಗಿದೆ. ಮಹಿಳೆ ಮತ್ತು ಆಕೆಯ ಮಗನನ್ನು ಅಪರಾಧ ವಿಭಾಗ ಬಂಧಿಸಿದೆ.

Ad Widget . Ad Widget .

ತಾಯಿ ಮತ್ತು ಮಗ ಜತೆ ಸೇರಿ ಪತಿಯನ್ನು ಕೊಂದು ಶವವನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟಿದ್ದಾರೆ. ಇಬ್ಬರೂ ಬೇರೆ ಬೇರೆ ದಿನಗಳಲ್ಲಿ ಬಂದು ಮಧ್ಯರಾತ್ರಿಯಲ್ಲಿ ಮೃತದೇಹದ ಭಾಗಗಳನ್ನು ಚಾಂದ್ ಚಿತ್ರಮಂದಿರದ ಮುಂಭಾಗದ ಮೈದಾನದಲ್ಲಿ ಎಸೆದಿದ್ದರು.

ತಂದೆಗೆ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧವಿತ್ತು ಎಂದು ತನಿಖೆಯ ವರದಿ ತಿಳಿಸಿದೆ. ಅದಕ್ಕಾಗಿಯೇ ಮಗ ತಾಯಿಯೊಂದಿಗೆ ಸೇರಿ ಈ ಕೃತ್ಯವನ್ನು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಯಿ ಮತ್ತು ಮಗ ಇಬ್ಬರೂ ಮೃತ ಅಂಜನ್ ದಾಸ್‌ಗೆ ಮೊದಲು ಅಮಲು ಮಾತ್ರೆಗಳನ್ನು ತಿನ್ನಿಸಿ, ನಂತರ ಕೊಂದಿದ್ದಾರೆ. ಕೊಂದ ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮಾಡಿ ಫ್ರಿಡ್ಜ್ ನಲ್ಲಿಟ್ಟಿದ್ದರು. ಯಾರಿಗೂ ಅನುಮಾನ ಬರದಂತೆ ಬೇರೆ ಬೇರೆ ದಿನಗಳಲ್ಲಿ, ಮಧ್ಯರಾತ್ರಿಯಲ್ಲಿ, ಮೃತ ದೇಹಗಳ ತುಂಡುಗಳನ್ನು ಚಾಂದ್ ಚಿತ್ರಮಂದಿರದ ಮುಂಭಾಗದ ಮೈದಾನದಲ್ಲಿ ಎಸೆದಿದ್ದರು. ದೆಹಲಿ ಪೊಲೀಸರು ಸದ್ಯ ಆರೋಪಿಗಳಾದ ಪೂನಂ ಮತ್ತು ದೀಪಕ್ ಇಬ್ಬರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *