Ad Widget .

ಷಷ್ಠಿ‌ ಮಹೋತ್ಸವ ವೇಳೆ ನಕಲಿ ಐಡಿ ಕಾರ್ಡ್ ಬಳಸಿ ಅನ್ಯಕೋಮಿನ ಯುವಕರಿಂದ ವ್ಯಾಪಾರ|ಹಿಂದೂ ಕಾರ್ಯಕರ್ತರಿಂದ ತರಾಟೆ

ಸಮಗ್ರ ನ್ಯೂಸ್:‌ ಚಂಪಾಷಷ್ಠಿ ಹಾಗೂ ದೇವಾಲಯ ವಾರ್ಷಿಕೋತ್ಸವದಲ್ಲಿ ಅನ್ಯಕೋಮಿನವರ ವ್ಯಾಪಾರ ವಹಿವಾಟು ನಿಷೇಧಿಸಿದ್ದರೂ, ಯುವಕನೊಬ್ಬ ಹಿಂದೂ ಹೆಸರಿನ ‘ಐಡಿ ಕಾರ್ಡ್’ ಬಳಸಿ ವ್ಯಾಪಾರ ನಡೆಸಲು ಬಂದು ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾದ ಘಟನೆ ಕೊಡಗು ಜಿಲ್ಲೆಯ ‌ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದ ದೇವಾಲಯದಲ್ಲಿ ನಡೆದಿದೆ.

Ad Widget . Ad Widget .

ಇಲ್ಲಿ ಸುಬ್ರಹ್ಮಣ್ಯ ಷಷ್ಠಿ ಹಾಗೂ ದೇವಾಲಯದ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭ ಹಿಂದೂಯೇತರರು ವ್ಯಾಪಾರ ನಡೆಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಒಂದು ವಾರದ ಹಿಂದೆಯೇ ಘೋಷಿಸಲಾಗಿತ್ತು. ಅಲ್ಲದೆ ಒಂದು ವೇಳೆ ವ್ಯಾಪಾರ ನಡೆಸಲು ಬಂದರೆ ಅದರ ಪರಿಣಾಮ ಬೇರೆ ರೀತಿಯಲ್ಲಿ ಎದುರಿಸಬೇಕಾಗುತ್ತದೆ ಎಂದು ಖಡಕ್ ಆಗಿ ಹಿಂದೂ ಸಂಘಟನೆಗಳ ಪ್ರಮುಖರು ಎಚ್ಚರಿಕೆಯನ್ನೂ ನೀಡಿದ್ದರು.

Ad Widget . Ad Widget .

ಆದರೆ ಈ ಎಚ್ಚರಿಕೆಗಳ ನಡುವೆಯೂ ಮಂಗಳವಾರ ಹರಿಹರ ದೇವಾಲಯದ ಸುಬ್ರಹ್ಮಣ್ಯ ಷಷ್ಠಿ ಇರುವ ಹಿನ್ನೆಲೆಯಲ್ಲಿ ಅನ್ಯಕೋಮಿನ ಕೆಲ ಯುವಕರು ಹಿಂದೂಗಳ ನಕಲಿ ಐಡಿ ಕಾರ್ಡ್ ಬಳಸಿಕೊಂಡು ದೇವಾಲಯದ ಹೊರಭಾಗದಲ್ಲಿ ವ್ಯಾಪಾರ ನಡೆಸುತ್ತಿರುವುದನ್ನು ಕಂಡ ಸಂಘಟನಾಕಾರರು ವ್ಯಾಪಾರಸ್ಥರ ಐಡಿ ಕಾರ್ಡ್ ಪರಿಶೀಲನೆ ನಡೆಸಲು ಮುಂದಾದರು. ಅನ್ಯಕೋಮಿನ ಯುವಕರು ಹಿಂದೂಗಳ ಐಡಿ ಕಾರ್ಡ್ ಬಳಸಿಕೊಂಡು ವ್ಯಾಪಾರ ನಡೆಸುತ್ತಿರುವುದು ಬೆಳಕಿಗೆ ಬಂದ ತಕ್ಷಣವೇ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ದುರ್ಗಾವಾಹಿನಿಯ ಜಿಲ್ಲಾ ಸಂಚಾಲಕಿ ಅಂಬಿಕಾ ಅವರು ಸ್ಥಳಕ್ಕೆ ತೆರಳಿ ಅನ್ಯಕೋಮಿನ ಯುವಕರನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಅವರ ವ್ಯಾಪಾರದ ಸಾಮಗ್ರಿಗಳನ್ನು ತೆರವು ಮಾಡಿ ಅಲ್ಲಿಂದ ಕಳುಹಿಸಿದರು.

Leave a Comment

Your email address will not be published. Required fields are marked *