Ad Widget .

ದತ್ತಜಯಂತಿ ಹಿನ್ನೆಲೆ; ಚಿಕ್ಕಮಗಳೂರಿನ ಈ ಪ್ರದೇಶಗಳಿಗೆ 5 ದಿನ ಪ್ರವಾಸಿಗರ ಭೇಟಿ ನಿರ್ಬಂಧಿಸಿದ ಜಿಲ್ಲಾಧಿಕಾರಿ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯಲ್ಲಿ ದತ್ತಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗಿರಿ ಭಾಗಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ 5 ದಿನಗಳ ಕಾಲ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಪೀಠ ಗ್ರಾಮದ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಡಿಸೆಂಬರ್ 6ರಿಂದ 8 ರವರೆಗೆ ದತ್ತಜಯಂತಿ ಕಾರ್ಯಕ್ರಮ ನಡೆಯಲಿದೆ.

Ad Widget . Ad Widget . Ad Widget .

ಆದ್ದರಿಂದ ಡಿಸೆಂಬರ್ 5ರ ಬೆಳಗ್ಗೆ 9 ಗಂಟೆಯಿಂದ ಡಿಸೆಂಬರ್ 9ರ ಬೆಳಗ್ಗೆ 10 ಗಂಟೆಯವರೆಗೆ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳ, ಮತ್ತು ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಭಾಗಗಳಿಗೆ ಪ್ರಾವಸಿಗರು, ಯಾತ್ರಾರ್ಥಿಗಳು ಭೇಟಿ ನೀಡುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈ ನಿರ್ಬಂಧ ಹೇರಿರುವ ದಿನಗಳಲ್ಲಿ ಪ್ರವಾಸಿಗರು ಹೋಟೆಲ್, ಹೋಂ ಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ವಾಸ್ತವ್ಯಕ್ಕೆ ಕಾಯ್ದಿರಿಸಿಕೊಂಡಿದ್ದರೆ, ವಾಸ್ತವ್ಯ ಮಾಡಲು ಯಾವುದೇ ನಿರ್ಬಂಧವಿರುವುದಿಲ್ಲ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *