ಪದವೀಧರ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ

ಸಮಗ್ರ‌ ನ್ಯೂಸ್: ರಾಜ್ಯದ ವಿವಿಧ ಶಾಲೆಗಳಲ್ಲಿ ಖಾಲಿ ಇದ್ದ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಈ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

. Ad Widget . Ad Widget . Ad Widget .

ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15 ಸಾವಿರ ಪದವೀಧದ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. 15 ಸಾವಿರ ಹುದ್ದೆಗಳಿಗೆ 13,363 ಅಭ್ಯರ್ಥಿಗಳು ಮಾತ್ರವೇ ಆಯ್ಕೆಯಾಗಿದ್ದರು. ಇನ್ನೂ 1,637 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಇಲ್ಲದೇ ಖಾಲಿ ಉಳಿದಿದ್ದವು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಶಿಕ್ಷಣ ಇಲಾಖೆ ಪ್ರಕಟಿಸಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಸಂಬಂಧ ಅಕ್ಷತ ಚೌಗಲೆ ಎಂಬುವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರ ಪರವಾಗಿ ಲತಾ ಶೆಟ್ಟಿ ಎಂಬುವಂತ ವಕೀಲರು ವಾದಿಸಿದ್ದರು.

ನ.28ರಂದು ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಇವರನ್ನು ಒಳಗೊಂಡ ನ್ಯಾಯಪೀಠವು, ಮುಂದಿನ ಆದೇಶದವರೆಗೆ ನ.18ರಂದು ಪ್ರಕಟಿಸಿರುವ 1:1 ತಾತ್ಕಾಲಿಕ ಶಿಕ್ಷಕರ ಆಯ್ಕೆ ಪಟ್ಟಿಗೆ ತಡೆಯಾಜ್ಞೆಯನ್ನು ನೀಡಿ, ಆದೇಶಿಸಿದ್ದಾರೆ.

Leave a Comment

Your email address will not be published. Required fields are marked *