Ad Widget .

ಹಿಜಾಬ್ ವಿವಾದ ಎಫೆಕ್ಟ್; ರಾಜ್ಯದ‌10 ಕಡೆ ಮುಸ್ಲಿಂ ‌ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜಿಗೆ ಸರ್ಕಾರದ ಒಪ್ಪಿಗೆ| ಇದು ಖಂಡನೀಯ ಎಂದ ಶ್ರೀರಾಮ ಸೇನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲಾಗುವುದು. ರಾಜ್ಯ ಸರ್ಕಾರದಿಂದಲೇ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಅಸ್ತು ಎನ್ನಲಾಗಿದೆ.

Ad Widget . Ad Widget .

ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಮುಂದಿನ ತಿಂಗಳು ಶಂಕುಸ್ಥಾಪನೆ ನೆರವೇರಿಸಲಾಗುವುದು. ಕಾಲೇಜು ನಿರ್ಮಾಣದ ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುವುದು. ಪ್ರತಿ ಕಾಲೇಜಿಗೆ 2.50 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಸರ್ಕಾರ ವಕ್ಫ್ ಬೋರ್ಡ್ ನೀಡುವ ಅನುದಾನದಲ್ಲಿ ಕಾಲೇಜು ನಿರ್ಮಿಸಲಾಗುವುದು.

Ad Widget . Ad Widget .

ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ ಕಣ್ಣೂರಿನಲ್ಲಿ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ 10 ಕಡೆ ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಿಸಲಾಗುವುದು ಎಂದು ರಾಜ್ಯ ಬೋರ್ಡ್ ಅಧ್ಯಕ್ಷ ಶಾಫಿ ಸಾಅದಿ ಮಾಹಿತಿ ನೀಡಿದ್ದಾರೆ.

ಆದರೆ ಸರ್ಕಾರದ ನಿರ್ಧಾರಕ್ಕೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದು, 10 ಮುಸ್ಲಿಂ ಮಹಿಳಾ ಕಾಲೇಜು ನಿರ್ಮಾಣ ಖಂಡನೀಯ ಎಂದಿದ್ದಾರೆ.

ರಾಜ್ಯದಲ್ಲಿ 10 ಮುಸ್ಲಿಂ ಕಾಲೇಜು ನಿರ್ಮಾಣ ಮಾಡುವುತ್ತಿರುವುದು ಖಂಡನೀಯವಾಗಿದೆ. ಕಾಲೇಜು ನಿರ್ಮಾಣ ಮಾಡಿದ್ರೆ ರಾಜ್ಯದಲ್ಲಿ ತೀವ್ರ ಹೋರಾಟ ನಡೆಸುತ್ತೇವೆ, ಹಿಜಾಬ್ ಸಲುವಾಗಿ ಕಾಲೇಜು ನಿರ್ಮಿಸಿದ್ರೆ ಪ್ರತಿಭಟನೆ ನಡೆಸಲಿದ್ದೇವೆ. ನಾವು ಮುಸ್ಲಿಂ ಕಾಲೇಜು ನಿರ್ಮಾಣ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Leave a Comment

Your email address will not be published. Required fields are marked *