Ad Widget .

ಟೊಯೋಟಾ ಕಿರ್ಲೋಸ್ಕರ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಇನ್ನಿಲ್ಲ

ಸಮಗ್ರ ನ್ಯೂಸ್: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವೈಸ್ ಚೇರ್ಮನ್ ವಿಕ್ರಮ್ ಕಿರ್ಲೋಸ್ಕರ್(64) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget . Ad Widget .

ವಿಕ್ರಮ್ ಕಿರ್ಲೋಸ್ಕರ್ ಭಾರತದ ವಾಹನೋದ್ಯಮದ ದಿಗ್ಗಜರಲ್ಲಿ ಒಬ್ಬರು. ವಿಕ್ರಮ್ ಕಿರ್ಲೋಸ್ಕರ್ ಅವರು ತೀವ್ರ ಹೃದಯಾಘಾತದಿಂದ ಬಳಲುತ್ತಿದ್ದ ಅವರು ಇಂದು ಉಸಿರುಚೆಲ್ಲಿದರು.

Ad Widget . Ad Widget .

ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ ಗಳಲ್ಲಿ ನಿಧನದ ಸುದ್ದಿಯನ್ನು ದೃಢಪಡಿಸಿದೆ. ನವೆಂಬರ್ 29, 2022 ರಂದು ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷರಾದ ಶ್ರೀ ವಿಕ್ರಮ್ ಎಸ್.ಕಿರ್ಲೋಸ್ಕರ್ ಅವರ ಅಕಾಲಿಕ ನಿಧನವನ್ನು ತಿಳಿಸಲು ನಾವು ತುಂಬಾ ದುಃಖಿತರಾಗಿದ್ದೇವೆ. ಈ ದುಃಖದ ಸಮಯದಲ್ಲಿ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವು ಎಲ್ಲರಿಗೂ ವಿನಂತಿಸುತ್ತೇವೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನಾವು ನಮ್ಮ ಆಳವಾದ ಸಹಾನುಭೂತಿಗಳನ್ನು ವ್ಯಕ್ತಪಡಿಸುತ್ತೇವೆ ಎಂದು ಹೇಳಲಾಗಿದೆ.

30 ನವೆಂಬರ್ 2022 ರಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೆಬ್ಬಾಳ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *