November 2022

ಚಾರ್ಮಾಡಿ ಘಾಟ್ ನಲ್ಲಿ ಹಂದಿಗಳ ಕಳೇಬರ| ಮೂಗು ಮುಚ್ಚಿಕೊಂಡು ಓಡಾಡುವ ಪ್ರಯಾಣಿಕರು

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟ್‍ನ ಮಲಯಮಾರುತ ಸಮೀಪ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ಹಂದಿಗಳ ಕಳೇಬರವನ್ನು ಎಸೆದು ಹೋದ ಘಟನೆ ನಡೆದಿದೆ. ನಾಲ್ಕಕ್ಕೂ ಹೆಚ್ಚು ಬಾರಿ ಗಾತ್ರ ಹಂದಿಗಳನ್ನು ಎಸೆದು ಹೋಗಿದ್ದು ರಸ್ತೆ ಬದಿಯಲ್ಲಿ ಎಸೆದಿರುವುದರಿಂದ ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ.ಸಮೀಪದಲ್ಲೆ ತೊರೆಯೊಂದು ಹರಿಯುತ್ತಿದ್ದು ಹಂದಿಯ ಕಳೇಬರ ಕೊಳೆತು ತೊರೆಯನ್ನು ಸೇರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಮಂಗಳೂರು ಕಡೆಗೆ ಹಂದಿಗಳನ್ನು ಸಾಗಾಟ ಮಾಡುವ ವಾಹನ ಚಾಲಕರು ಸತ್ತ ಹಂದಿಗಳನ್ನು ಹೀಗೆ ಎಸೆದು […]

ಚಾರ್ಮಾಡಿ ಘಾಟ್ ನಲ್ಲಿ ಹಂದಿಗಳ ಕಳೇಬರ| ಮೂಗು ಮುಚ್ಚಿಕೊಂಡು ಓಡಾಡುವ ಪ್ರಯಾಣಿಕರು Read More »

“ವಶೀಕರಣ ಸ್ಪೆಷಲಿಸ್ಟ್ಗೆ” ಮಹಾ ಮಂಗಳಾರತಿ|ನಕಲಿ ಜ್ಯೋತಿಷಿಯ ಚಳಿ ಬಿಡಿಸಿದ ಸಾಮಾಜಿಕ ಕಾರ್ಯಕರ್ತ

ಸಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾದಲ್ಲಿ “ವಶೀಕರಣ ಸ್ಪೆಷಲಿಸ್ಟ್” ಎಂದು ತೀರಾ ಅಶ್ಲೀಲವಾಗಿ ಜಾಹೀರಾತು ಹಾಕಿಕೊಂಡಿದ್ದಲ್ಲದೆ ಮಂಗಳೂರಿನ ಸ್ಟೇಟ್ ಬ್ಯಾಂಕ್, ಹಂಪನಕಟ್ಟೆ ಹಾಗೂ ಉಡುಪಿಯನ್ನು ಕಾರ್ಯಸ್ಥಾನ ಮಾಡಿಕೊಂಡಿದ್ದ ನಕಲಿ ಜ್ಯೋತಿಷಿಗೆ ಸಾಮಾಜಿಕ ಕಾರ್ಯಕರ್ತ ದೀಪು ಶೆಟ್ಟಿಗಾರ್ ಎಂಬವರು ಮಂಗಳಾರತಿ ಮಾಡಿದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಕೇರಳ, ಶಿವಮೊಗ್ಗ, ಭದ್ರಾವತಿ, ಮೈಸೂರು, ಬೆಂಗಳೂರು, ಕೊಳ್ಳೇಗಾಲ ಕಡೆಯಿಂದ ಮಂಗಳೂರಿಗೆ ವಕ್ಕರಿಸುವ ಇವರು ಆಡಿದ್ದೇ ಆಟ ಎಂಬಂತಾಗಿದ್ದು ನಗರದ ಪ್ರಮುಖ ನಿಲ್ದಾಣಗಳಲ್ಲಿ ಲಾಡ್ಜ್, ಎಸಿ ರೂಮ್‌ಗಳಲ್ಲಿ

“ವಶೀಕರಣ ಸ್ಪೆಷಲಿಸ್ಟ್ಗೆ” ಮಹಾ ಮಂಗಳಾರತಿ|ನಕಲಿ ಜ್ಯೋತಿಷಿಯ ಚಳಿ ಬಿಡಿಸಿದ ಸಾಮಾಜಿಕ ಕಾರ್ಯಕರ್ತ Read More »

ನಾಳೆ ಮಂಗಳೂರಿಗೆ ಸಿಎಂ ಬೊಮ್ಮಾಯಿ ಭೇಟಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ. 19ರ ಶನಿವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಅಂದು ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು 10.30ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸಂಸ್ಕೃತಿ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯಗೌಡ ಸ್ಮಾರಕ ಉಸ್ತುವಾರಿ ಸಮಿತಿ(ರಿ), ವತಿಯಿಂದ ನಗರದ ಬಾವುಟಗುಡ್ಡೆಯಲ್ಲಿ ಆಯೋಜಿಸಿರುವ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಕೆದಂಬಾಡಿ ರಾಮಯ್ಯಗೌಡರ ಪ್ರತಿಮೆ ಲೋಕಾರ್ಪಣೆ

ನಾಳೆ ಮಂಗಳೂರಿಗೆ ಸಿಎಂ ಬೊಮ್ಮಾಯಿ ಭೇಟಿ Read More »

ಅಪರಿಚಿತ ಸಂಖ್ಯೆಯಿಂದ ಕರೆಯೇ? ಇನ್ನಿಲ್ಲ ಗೊಂದಲ

ಸಮಗ್ರ ನ್ಯೂಸ್: ಅಪರಿಚಿತ (unknown) ನಂಬರ್, ಸ್ಪ್ಯಾಮ್ ಅಥವಾ ಅನಪೇಕ್ಷಿತ ಕರೆಗಳ ಸಮಸ್ಯೆಯನ್ನು ನಿವಾರಿಸಲು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊಸ ಮಾರ್ಗ ಕಂಡು ಹಿಡಿದಿದೆ. ಫೋನ್‌ನಲ್ಲಿ ಸೇವ್ ಆಗಿರದ ನಂಬರ್‌ಗಳಿಂದ ಯಾರಾದರೂ ಕರೆ ಮಾಡಿದರೆ ಕರೆ ಮಾಡಿದ ವ್ಯಕ್ತಿಯ ಹೆಸರು ನಿಮ್ಮ ಮೊಬೈಲ್‌ನಲ್ಲಿ ಕಂಡುಬರುವಂತೆ ಮಾಡುವ ಹೊಸ ಉಪಕ್ರಮವನ್ನು ಟ್ರಾಯ್ ಶೀಘ್ರವೇ ಜಾರಿಗೆ ತರಲು ಸಜ್ಜಾಗಿದೆ. ಟೆಲಿಕಾಂ ಆಪರೇಟರ್‌ಗಳ ಬಳಿ ಲಭ್ಯವಿರುವ ಕೆವೈಸಿ (ನಿಮ್ಮ ಗ್ರಾಹಕರನ್ನು ತಿಳಿಯಿರಿ) ದಾಖಲೆಯನ್ನು ಆಧರಿಸಿ ಕರೆ ಮಾಡಿದವರ ಹೆಸರನ್ನು ತಿಳಿಯುವಂತೆ

ಅಪರಿಚಿತ ಸಂಖ್ಯೆಯಿಂದ ಕರೆಯೇ? ಇನ್ನಿಲ್ಲ ಗೊಂದಲ Read More »

ಶಾಲೆಗೆ ಹೋಗಿದ್ದ 7ನೇ ತರಗತಿ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆ – ಶಾಲಾ ಆವರಣದಲ್ಲಿ ಬ್ಯಾಗ್ ಇಟ್ಟು ದಿಢೀರ್ ಕಣ್ಮರೆ

ಸಮಗ್ರ ನ್ಯೂಸ್: ಶಾಲೆಗೆ ತೆರಳಿದ್ದ ಏಳನೇ ತರಗತಿ ವಿದ್ಯಾರ್ಥಿನಿ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಅಣತಿ ಗ್ರಾಮದಲ್ಲಿ ನಡೆದಿದೆ. ದಾಸರಹಳ್ಳಿ ಗ್ರಾಮದ ಡಿ.ಬಿ.ಕುಮಾರ್ ಅವರ ಸಾಕು ಮಗಳು ನಂದಿತಾ ಕಾಣೆಯಾದಾಕೆ. ಅಣತಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ನಂದಿತಾ, ಸರ್ಕಾರಿ ಹಾಸ್ಟೆಲ್‍ನಲ್ಲಿದ್ದಳು. ನವೆಂಬರ್ 7ರಂದು ಸಂಜೆ 5 ಗಂಟೆ ಸುಮಾರಿಗೆ ಶಾಲೆ ಮುಗಿಸಿ ಹಾಸ್ಟೆಲ್‍ಗೆ ಹೋಗದೆ ನಾಪತ್ತೆಯಾಗಿದ್ದಾಳೆ. ಮೂಲತಃ ಕೆ.ಆರ್.ಪೇಟೆ, ತಾಲ್ಲೂಕಿನ ನಂಜೇಗೌಡ ಮಂಗಳ ದಂಪತಿ ಪುತ್ರಿ ನಂದಿತಾಳನ್ನು ತಾತ ಚನ್ನರಾಯಪಟ್ಟಣ ದಾಸರಹಳ್ಳಿ

ಶಾಲೆಗೆ ಹೋಗಿದ್ದ 7ನೇ ತರಗತಿ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆ – ಶಾಲಾ ಆವರಣದಲ್ಲಿ ಬ್ಯಾಗ್ ಇಟ್ಟು ದಿಢೀರ್ ಕಣ್ಮರೆ Read More »

ಪಂಚರತ್ನ ಯಾತ್ರೆ ಉದ್ಘಾಟನೆ ಹಿನ್ನಲೆ| ನಂಜುಂಡೇಶ್ವರಿನಿಗೆ ವಿಶೇಷ ಪೂಜೆ ಸಲ್ಲಿಸಿದ ಹೆಚ್ಡಿಕೆ

ಸಮಗ್ರ ನ್ಯೂಸ್: ನವೆಂಬರ್ 18 ರಿಂದ ಪಂಚರತ್ನ ಯಾತ್ರೆ ಆರಂಭವಾಗುವ ಹಿನ್ನಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಾಜಿ ಪ್ರಧಾನಿ ದೇವೇಗೌಡರ ಹೆಸರು ಹಾಗೂ ಕುಟುಂಬಸ್ಥರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.‌ ಹೆಚ್.ಡಿ.ಕೆ.ಗೆ ಮಾಜಿ ಸಚಿವ ಬಂಡಾಪುರ್ ಕಾಶಿಪುರ್, ಶಾಸಕ ಕುಮಾರಸ್ವಾಮಿ, ಶಾಸಕ ಮಂಜೇಗೌಡ, ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ತಾಲೂಕು ಅಧ್ಯಕ್ಷ ಆರ್ ವಿ ಮಹಾದೇವಸ್ವಾಮಿ ಯುವ ತಾಲೂಕು ಅಧ್ಯಕ್ಷ ಸಂಜಯ ಸೇರಿದಂತೆ ಹಲವರು ಸಾಥ್ ನೀಡಿದರು.

ಪಂಚರತ್ನ ಯಾತ್ರೆ ಉದ್ಘಾಟನೆ ಹಿನ್ನಲೆ| ನಂಜುಂಡೇಶ್ವರಿನಿಗೆ ವಿಶೇಷ ಪೂಜೆ ಸಲ್ಲಿಸಿದ ಹೆಚ್ಡಿಕೆ Read More »

ಲಿಂಗಾಯತರು ಹಿಂದೂಗಳಲ್ಲ – ತೋಂಟದಾರ್ಯ ಸ್ವಾಮೀಜಿ

ಸಮಗ್ರ ನ್ಯೂಸ್: ಹಿಂದೂ ಧರ್ಮ ಅಲ್ಲ, ಇದು ಜೀವನ ಶೈಲಿಯಾಗಿದೆ. ವೈದಿಕ ಧರ್ಮಕ್ಕೆ ಈಗ ಹಿಂದೂ ಧರ್ಮ ಎಂದು ಕರೆಲಾಗುತ್ತಿದೆ. ವೈದಿಕ ಧರ್ಮವನ್ನು ಹಿಂದೂ ಧರ್ಮ ಎಂದು ಕರೆದಾಗ, ಲಿಂಗಾಯತರು ಹಿಂದೂಗಳು ಆಗಲ್ಲ. ಲಿಂಗಾಯತ ಧರ್ಮ ಅವೈದಿಕ ಧರ್ಮ, ವೇಗ, ಆಗಮನ, ಪುರಾಣವನ್ನು ವಿರೋಧಿಸಿದ ಧರ್ಮ. ದೇಶದಲ್ಲಿ ಜೈನ, ಬೌದ್ಧ, ಕ್ರೈಸ್ತರಂತೆ ಲಿಂಗಾಯತ ಸಹ ಒಂದು ಪ್ರತ್ಯೇಕ ಧರ್ಮ. ಹಿಂದೂಗಳ ಆಚರಣೆ ಹಾಗೂ ಲಿಂಗಾಯತರ ಆಚರಣೆಗೆ ವ್ಯತ್ಯಾಸ ಇದೆ ಎಂದು ಬೆಳಗಾವಿಯಲ್ಲಿ ಗದಗಿ ತೋಂಟದಾರ್ಯ ಮಠದ ಡಾ.

ಲಿಂಗಾಯತರು ಹಿಂದೂಗಳಲ್ಲ – ತೋಂಟದಾರ್ಯ ಸ್ವಾಮೀಜಿ Read More »

ಪಶ್ಚಿಮ ಬಂಗಾಳಕ್ಕೆ ಹೊಸ ರಾಜ್ಯಪಾಲ

ಡಾ.ಸಿ.ವಿ. ಆನಂದ ಬೋಸ್ ಅವರನ್ನು ಪಶ್ಚಿಮ ಬಂಗಾಳದ ರಾಜ್ಯಪಾಲರನ್ನಾಗಿ ಗುರುವಾರ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಅವರ ನೇಮಕವು ಅವರು ತಮ್ಮ ಕಚೇರಿಯ ಜವಾಬ್ದಾರಿಯನ್ನು ವಹಿಸಿಕೊಳ್ಳುವ ದಿನಾಂಕದಿಂದ ಜಾರಿಗೆ ಬರಲಿದೆ ಎಂದು ಹೇಳಿದೆ. ಮಣಿಪುರ ಗವರ್ನರ್ ಲಾ ಗಣೇಶನ್ ಅವರು ಜುಲೈನಿಂದ ಪಶ್ಚಿಮ ಬಂಗಾಳದ ಹೆಚ್ಚುವರಿ ಉಸ್ತುವಾರಿ ವಹಿಸಿಕೊಂಡಿದ್ದರು.

ಪಶ್ಚಿಮ ಬಂಗಾಳಕ್ಕೆ ಹೊಸ ರಾಜ್ಯಪಾಲ Read More »

ಮೆಟಾ ಇಂಡಿಯಾ ಮುಖ್ಯಸ್ಥರಾಗಿ ಸಂಧ್ಯಾ ದೇವನಾಥನ್ ನೇಮಕ

ಸಮಗ್ರ ನ್ಯೂಸ್: ಫೇಸ್​ಬುಕ್​ ವಾಟ್ಸ್​ಆಯಪ್​ಗಳ ಒಡೆತನ ಹೊಂದಿರುವ ಮೆಟಾ ಕಂಪನಿಯ ಭಾರತದ ಮುಖ್ಯಸ್ಥರಾಗಿ ಸಂಧ್ಯಾ ದೇವನಾಥನ್​ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದಿನ ಮುಖ್ಯಸ್ಥರಾಗಿದ್ದ ಅಜಿತ್​ ಮೋಹನ್​ ಅವರು ಇತ್ತೀಚೆಗಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾದ ಜಾಗವನ್ನು ದೇವನಾಥನ್​ ತುಂಬಲಿದ್ದಾರೆ. ವಾಟ್ಸಾಪ್‌ನ ಭಾರತದ ಮುಖ್ಯಸ್ಥ ಅಭಿಜಿತ್ ಬೋಸ್ ಮತ್ತು ಭಾರತದಲ್ಲಿ ಮೆಟಾ ಸಂಸ್ಥೆಯ ಸಾರ್ವಜನಿಕ ನೀತಿ ನಿರ್ದೇಶಕ ರಾಜೀವ್ ಅಗರ್​ವಾಲ್​ ಕೂಡ ಇತ್ತೀಚೆಗೆ ಕಂಪನಿಯಿಂದ ಹೊರಬಂದಿದ್ದರು.

ಮೆಟಾ ಇಂಡಿಯಾ ಮುಖ್ಯಸ್ಥರಾಗಿ ಸಂಧ್ಯಾ ದೇವನಾಥನ್ ನೇಮಕ Read More »

ದಾಂಡೇಲಿಯ ರೆಸಾರ್ಟ್ ನಲ್ಲಿ ನಡೀತಿತ್ತು ಮಾಂಸದಂಧೆ| ಪೊಲೀಸರಿಂದ 6 ಯುವತಿಯರ ರಕ್ಷಣೆ

ಸಮಗ್ರ ನ್ಯೂಸ್: ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ಬಳಿಯ ರೆಸಾರ್ಟ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬೇಧಿಸಿದ್ದು, ಮೂರು ಜನರನ್ನು ಬಂಧಿಸಿ ಆಂಧ್ರ ಪ್ರದೇಶ ಮೂಲದ ಆರು ಹುಡುಗಿಯರನ್ನು ರಕ್ಷಿಸಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಆಂಧ್ರಪ್ರದೇಶದ ಎಂಟು ಯುವತಿಯರನ್ನು ರೆಸಾರ್ಟ್‌ನ ಕೊಠಡಿಯಲ್ಲಿ ಬಂಧಿಸಿಡಲಾಗಿತ್ತು. ಹರೇಗಾಳಿ ಗ್ರಾಮದ ಗಣೇಶಗುಡಿ ರಸ್ತೆಯ ಬರ್ಚಿ ಕ್ರಾಸ್ ಬಳಿ ರೆಸಾರ್ಟ್ ಮೇಲೆ ದಾಳಿ ನಡೆಸಲಾಗಿದ್ದು, ರೆಸಾರ್ಟ್‌ನ ಮ್ಯಾನೇಜರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು

ದಾಂಡೇಲಿಯ ರೆಸಾರ್ಟ್ ನಲ್ಲಿ ನಡೀತಿತ್ತು ಮಾಂಸದಂಧೆ| ಪೊಲೀಸರಿಂದ 6 ಯುವತಿಯರ ರಕ್ಷಣೆ Read More »