ಕಡಬ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಫಾರ್ಚ್ಯೂನರ್| ಬೆಂಗಳೂರು ಮೂಲದ ಐವರು ಗಂಭೀರ
ಸಮಗ್ರ ನ್ಯೂಸ್: ಫಾರ್ಚ್ಯೂನರ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ನ.8ರಂದು ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೊಯೋಟಾ ಫಾರ್ಚ್ಯೂನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರಿಗೆ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ.
ಕಡಬ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಫಾರ್ಚ್ಯೂನರ್| ಬೆಂಗಳೂರು ಮೂಲದ ಐವರು ಗಂಭೀರ Read More »