November 2022

ಶಿವಮೊಗ್ಗದಲ್ಲಿ ಮತ್ತೆ ಗುಂಡಿನ ಮೊರೆತ| ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗೆ ಫೈರಿಂಗ್

ಸಮಗ್ರ ನ್ಯೂಸ್: ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಶಿವಮೊಗ್ಗ ಹೊರವಲಯದ ಪುರಲೆಯಲ್ಲಿ ಅಸ್ಲಾಂ ಎಂಬುವನ ಬಲಗಾಲಿಗೆ ಗುಂಡು ಹಾರಿಸಲಾಗಿದ್ದು ಆರೋಪಿ ಗಾಯಗೊಂಡಿದ್ದಾನೆ. ಅ. 30 ರಂದು ರಾತ್ರಿ ಶಿವಮೊಗ್ಗದ ಬಿಹೆಚ್ ರಸ್ತೆಯಲ್ಲಿ ಅಶೋಕ ಪ್ರಭು ಎಂಬುವರ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ಮಾಡಲಾಗಿದ್ದು, ಗಾಯಾಳು ಅಶೋಕ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಸ್ಲಾಂನನ್ನು ಬಂಧಿಸಲು […]

ಶಿವಮೊಗ್ಗದಲ್ಲಿ ಮತ್ತೆ ಗುಂಡಿನ ಮೊರೆತ| ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗೆ ಫೈರಿಂಗ್ Read More »

ಗಂಟಲಲ್ಲಿ ಆಮ್ಲೇಟ್ ಸಿಲುಕಿ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಕುಡಿಯಲು ಬಾರ್​​ಗೆ ಹೋದ ವ್ಯಕ್ತಿಯೊಬ್ಬ ಆಮ್ಲೆಟ್​​ ಗಂಟಲಿನಲ್ಲಿ ಸಿಕ್ಕಿಕೊಂಡ ಪರಿಣಾಮ ಮೃತಪಟ್ಟಿರುವ ದಾರುಣ ಘಟನೆ ಜನಗಾಮ ಜಿಲ್ಲೆಯ ಬಚನ್ನಪೇಟೆಯಲ್ಲಿ ನಡೆದಿದೆ. ಬಚ್ಚನ್ನಪೇಟೆಯ ಇದುಲಕಂತಿ ಭೂಪಾಲ್ ರೆಡ್ಡಿ (38) ಮೃತ ವ್ಯಕ್ತಿ. ಇವರು ಸ್ಥಳೀಯ ಮದ್ಯದ ಅಂಗಡಿಯೊಂದರಲ್ಲಿ ಕೊಠಡಿಯಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದರು. ಈ ವೇಳೆ, ತಿನ್ನುತ್ತಿದ್ದ ಆಮ್ಲೆಟ್ ಗಂಟಲಿನಲ್ಲಿ ಸಿಲುಕಿಕೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಗಂಟಲಲ್ಲಿ ಆಮ್ಲೇಟ್ ಸಿಲುಕಿ ವ್ಯಕ್ತಿ ಸಾವು Read More »

ಕುಕ್ಕೆ ಸುಬ್ರಹ್ಮಣ್ಯ: ಚಂದ್ರಗ್ರಹಣ ಹಿನ್ನೆಲೆ| ನ.8ರಂದು ದೇವಳದಲ್ಲಿ ಸೇವೆಗಳಿಗೆ ಬ್ರೇಕ್

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂದ್ರಗ್ರಹಣದ ದಿನವಾದ ನ. 8ರಂದು ಸೇವೆಗಳನ್ನು ರದ್ದುಗೊಳಿಸಿ ದೇವಸ್ಥಾನದ ಆಡಳಿತ ಪ್ರಕಟಣೆ ಹೊರಡಿಸಿದೆ. ನ.8ರಂದು ದೇವಸ್ಥಾನದಲ್ಲಿ ಭೋಜನ ಪ್ರಸಾದ ವಿತರಣೆ ಕೂಡ ಇರುವುದಿಲ್ಲ. ಬೆಳಗ್ಗೆ 9ರಿಂದ 11.30ರ ತನಕ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಗ್ರಹಣ ಸ್ಪರ್ಶ ಸಮಯವಾದ ಮಧ್ಯಾಹ್ನ 2.39ರಿಂದ ಗ್ರಹಣ ಮೋಕ್ಷ ಸಮಯವಾದ 6.19ರ ತನಕ ದರ್ಶನ ರದ್ದುಗೊಳಿಸಲಾಗಿದ್ದು, ಆ ನಂತರ ರಾತ್ರಿ 7.30ರಿಂದ 9ರ ತನಕ ಶ್ರೀ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ

ಕುಕ್ಕೆ ಸುಬ್ರಹ್ಮಣ್ಯ: ಚಂದ್ರಗ್ರಹಣ ಹಿನ್ನೆಲೆ| ನ.8ರಂದು ದೇವಳದಲ್ಲಿ ಸೇವೆಗಳಿಗೆ ಬ್ರೇಕ್ Read More »

ಕಟೀಲು‌ ಯಕ್ಷಗಾನ ಸೇವೆ ಕಾಲಮಿತಿ ರದ್ದುಗೊಳಿಸಲು ಭಕ್ತಾಧಿಗಳ‌ ಆಗ್ರಹ| ದೇವಳಕ್ಕೆ ಪಾದಯಾತ್ರೆ ನಡೆಸಲು ನಿರ್ಧಾರ

ಸಮಗ್ರ ನ್ಯೂಸ್: ಯಕ್ಷಗಾನದ ಪಾರಂಪರಿಕ ಮೇಳವೆಂದೇ ಖ್ಯಾತವಾಗಿರುವ ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಬಯಲಾಟ ಪ್ರದರ್ಶನವನ್ನು ಕಾಲಮಿತಿಗೆ ಒಳಪಡಿಸಿರುವ ಆಡಳಿತ ಮಂಡಳಿಯ ನಿರ್ಧಾರಕ್ಕೆ ಭಕ್ತಾದಿಗಳ ವಲಯದಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಯಕ್ಷಗಾನ ಪರಂಪರೆಯಂತೆ ಬೆಳಗ್ಗಿನವರೆಗೆ ನಡೆಯಬೇಕೆಂದು ಆಗ್ರಹಿಸಿ ಶ್ರೀ ಕಟೀಲು ಯಕ್ಷ ಸೇವಾ ಸಮನ್ವಯ ಸಮಿತಿಯ ಸದಸ್ಯರು ನ.6ರಂದು ಬಜಪೆ ಶ್ರೀ ಶಾರದಾ ಶಕ್ತಿ ಮಂಟಪದಿಂದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ವರೆಗೆ `ಕಟೀಲಮ್ಮನೆಡೆಗೆ ಭಕ್ತರ ನಡೆ’ ಪಾದಯಾತ್ರೆಯನ್ನು ನಡೆಸಲು ನಿರ್ಧರಿಸಿದ್ದಾರೆ. ದೇವಸ್ಥಾನದ ಮೇಳದವರು ಹಿಂದಿನಿಂದಲೂ ನಡೆಸಿಕೊಂಡು

ಕಟೀಲು‌ ಯಕ್ಷಗಾನ ಸೇವೆ ಕಾಲಮಿತಿ ರದ್ದುಗೊಳಿಸಲು ಭಕ್ತಾಧಿಗಳ‌ ಆಗ್ರಹ| ದೇವಳಕ್ಕೆ ಪಾದಯಾತ್ರೆ ನಡೆಸಲು ನಿರ್ಧಾರ Read More »

ವಿಕೃತಕಾಮಿ ಉಮೇಶ್ ರೆಡ್ಡಿಗೆ ಬಿಗ್ ರಿಲೀಫ್| ಸುಪ್ರೀಂ ಕೋರ್ಟ್ ನಿಂದ ಗಲ್ಲು ಶಿಕ್ಷೆ ರದ್ದು

ಸಮಗ್ರ ನ್ಯೂಸ್: ಎರಡನೇ ಬಾರಿ ಕ್ಷಮಾದಾನ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ವಿಕೃತಕಾಮಿ ಉಮೇಶ್ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. 1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ

ವಿಕೃತಕಾಮಿ ಉಮೇಶ್ ರೆಡ್ಡಿಗೆ ಬಿಗ್ ರಿಲೀಫ್| ಸುಪ್ರೀಂ ಕೋರ್ಟ್ ನಿಂದ ಗಲ್ಲು ಶಿಕ್ಷೆ ರದ್ದು Read More »

ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ದುರ್ಮರಣ|

ಸಮಗ್ರ ನ್ಯೂಸ್: ಟ್ರಕ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಸಮೀಪ ನಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಮಹಿಳೆ ಮತ್ತು ಆಸ್ಪತ್ರೆಯಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. ಪ್ರಭಾವತಿ, ಗುಂಡಮ್ಮ, ಜಕ್ಕಮ್ಮ, ರಾಧಮ್ಮ, ರುಕ್ಮಿಣಿ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ 6 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ದುರ್ಮರಣ| Read More »

ಕೊರಗಜ್ಜನ ಆದಿತಳದ ಬುಡದಲ್ಲಿ ಜೆಸಿಬಿ ಘರ್ಜನೆ| ಕುಸಿಯುವ ಭೀತಿಯಲ್ಲಿ ದೇರಳಕಟ್ಟೆ ಸಾನಿಧ್ಯ!!

ಸಮಗ್ರ ನ್ಯೂಸ್: ಕುತ್ತಾರು ಏಳು ತಳಗಳಲ್ಲಿ ಒಂದಾಗಿರುವ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಎದುರುಗಡೆ ಇರುವ ಕೊರಗಜ್ಜನ ಆದಿತಳದ ಬುಡವನ್ನು ಜೆಸಿಬಿ ಮೂಲಕ ಅಗೆಯುವ ಕಾರ್ಯ ಆರಂಭಗೊಂಡಿದ್ದು, ಸಮಸ್ತ ದೈವಭಕ್ತರು ಆತಂಕಕ್ಕೆ ಒಳಗಾಗುವ ಸ್ಥಿತಿ ನಿರ್ಮಾಣವಾಗಿದೆ. ಫಿಝಾ ಗ್ರೂಪ್ ಸಂಸ್ಥೆ ಹಲವು ಎಕ್ರೆ ಜಾಗವನ್ನು ದೇರಳಕಟ್ಟೆ ಭಾಗದಲ್ಲಿ ಖರೀದಿಸಿದ್ದು, ಇದನ್ನು ಸಮತಟ್ಟುಗೊಳಿಸುವ ಕಾರ್ಯ ಹಲವು ತಿಂಗಳುಗಳಿಂದ ನಡೆಯುತ್ತಿದೆ. ಈ ನಡುವೆ ಕಾನೂನಿನ ತೊಡಕು ಉಂಟಾದ ಹಿನ್ನೆಲೆಯಲ್ಲಿ ಒಂದೊಮ್ಮ ಕಾಮಗಾರಿ ಸ್ಥಗಿತಗೊಂಡಿತ್ತು. ಕೊರಗಜ್ಜನ ಆದಿತಳದ ಜಾಗವನ್ನು ಬಿಟ್ಟು ಉಳಿದ

ಕೊರಗಜ್ಜನ ಆದಿತಳದ ಬುಡದಲ್ಲಿ ಜೆಸಿಬಿ ಘರ್ಜನೆ| ಕುಸಿಯುವ ಭೀತಿಯಲ್ಲಿ ದೇರಳಕಟ್ಟೆ ಸಾನಿಧ್ಯ!! Read More »

ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಕೆ : ರಾಹುಲ್ ವಿರುದ್ಧ ಎಫ್ಐಆರ್‌

ಸಮಗ್ರ ನ್ಯೂಸ್: ರಾಷ್ಟ್ರೀಯ ಕಾಂಗ್ರಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ‘ಕೆಜಿಎಫ್’ ಸಿನಿಮಾದ ಹಾಡೊಂದರ ಮ್ಯೂಸಿಕ್ ಬಳಸಿರುವ ಆರೋಪ ಕೇಳಿ ಬಂದಿದ್ದು, ಕಾಪಿ ರೈಟ್ಸ್ ಉಲ್ಲಂಘನೆಗಾಗಿ ಕಾಂಗ್ರೆಸ್ ಪಕ್ಷದ ಮೇಲೆ ಎಮ್.ಆರ್.ಟಿ ಸಂಸ್ಥೆಯು ಕಾನೂನು ಸಮರಕ್ಕೆ ಮುಂದಾಗಿದೆ. ತಮ್ಮ ಸಂಸ್ಥೆಯ ಅನುಮತಿ ಇಲ್ಲದೇ, ಕೆಜಿಎಫ್ ಸಿನಿಮಾದ ಸಂಗೀತವನ್ನು ಬಳಸಿಕೊಂಡಿದ್ದಕ್ಕಾಗಿ ಸಂಸ್ಥೆಯು ದೂರು ದಾಖಲಿಸಿದೆ. MRT ಸಂಸ್ಥೆಗೆ ಸೇರಿದ ಹಾಡುಗಳನ್ನು ಬಳಸಿದ ಆರೋಪ ಹೊತ್ತಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು, ಸಂಸ್ಥೆಯ ಅನುಮತಿ ಇಲ್ಲದೇ ಹಾಡುಗಳನ್ನು ಯಾತ್ರೆಯಲ್ಲಿ

ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಕೆ : ರಾಹುಲ್ ವಿರುದ್ಧ ಎಫ್ಐಆರ್‌ Read More »

“ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ-ಲಕ್ಷ ಲೂಟಿ ಮಾಡಲು ಹೊರಟಿದೆ”| “ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ”

ಬೆಂಗಳೂರು: ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಲಕ್ಷ-ಲಕ್ಷ ಲೂಟಿ ಮಾಡ್ತಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, 2018ರಲ್ಲಿ ನಾಮಪತ್ರ ಸಲ್ಲಿಸಲು ಕಾರ್ಯಕರ್ತರಿಂದ ಡಿಕೆ ಶಿವಕುಮಾರ್ 50-100 ಭಿಕ್ಷೆ ಬೇಡಿದರು. ಇದೀಗ ಕೋಟಿ-ಕೋಟಿ ರೂಪಾಯಿ ಆಸ್ತಿ ಇದ್ದರೂ, ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ-ಲಕ್ಷ ಲೂಟಿ ಮಾಡಲು ಹೊರಟಿದೆ. ಇದರಿಂದ ಆಕಾಂಕ್ಷಿಗಳ ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ ಎಂದು ಕುಟುಕಿದೆ.

“ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ-ಲಕ್ಷ ಲೂಟಿ ಮಾಡಲು ಹೊರಟಿದೆ”| “ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ” Read More »

ಸುಳ್ಯ: ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ|ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಸಬಾ ಗ್ರಾಮದ ಕುದ್ಪಾಜೆ ಎಂಬಲ್ಲಿ ಸುಮಾರು ಹದಿನೈದು ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದು ಈ ಬಗ್ಗೆ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ ಸಲ್ಲಿಸಲಾಯಿತು. ಕುದ್ಪಾಜೆಯಲ್ಲಿ ಸುಮಾರು ಹದಿನೈದು ದಲಿತ ಕುಟುಂಬಗಳು ವಾಸವಾಗಿದ್ದು ಪಂಚಾಯತ್ ನಿಂದ ಕುಡಿಯುವ ನೀರಿನ ಯೋಜನೆಗೆ ತಾರಾನಾಥ ಎಂಬವರ ಗೇಟಿನ ಹತ್ತಿರ ಕೊಳವೆಬಾವಿ ತೆಗೆಯಲು ಗುರುತು ಮಾಡಿದ್ದಾರು. ಆದರೆ ಸ್ಥಳೀಯ ರಾಜಕೀಯ ವ್ಯಕ್ತಿಗಳು ತಾರಾನಾಥ ಎಂಬವರ ಗೇಟಿನ ಹತ್ತಿರ ಕೊಳವೆಬಾವಿ ತೆಗೆಯಬಾರದು ಎಂದು ಹೇಳುತ್ತಿದ್ದಾರೆ. ತಾರಾನಾಥ

ಸುಳ್ಯ: ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ|ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ Read More »