November 2022

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ರೇಣುಕಾಚಾರ್ಯ ರವರ ಸಹೋದರ ಪುತ್ರ ಕಾಲುವೆಯೊಂದರಲ್ಲಿ ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಇಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಬಳಿ ಸಂಭವಿಸಿದೆ. ಶಾಸಕ ರೇಣುಕಾಚಾರ್ಯ ರವರ ಸಹೋದರನ ಮಗ ಚಂದ್ರ ಶೇಖರ್ ಕಳೆದ ಐದು ದಿನಗಳಿಂದ ಕಾಣೆಯಾಗಿದ್ದರು. ಈ ಬಗ್ಗೆ ಎಲ್ಲೆಡೆ ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿತ್ತು. ತುಂಗಾ ಕಾಲುವೆಗೆ ಕಾರು ಬಿದ್ದ ಬಗ್ಗೆ ಶಂಕೆ ವ್ಯಕ್ತವಾಗಿತ್ತು ಈ ಹಿನ್ನಲೆಯಲ್ಲಿ ಕಾಲುವೆಯಲ್ಲಿ ಶೋಧ […]

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಶವವಾಗಿ ಪತ್ತೆ Read More »

ಅಥಣಿ:ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಸವಾರ‌ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬೇಡರಹಟ್ಟಿ – ಅಥಣಿ ಮಾರ್ಗದ ನಡುವೆ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಬೇಡರಹಟ್ಟಿ ಗ್ರಾಮದ ಸಿದ್ದಪ್ಪಾ ವಾಲಿ ಎಂದು ತಿಳಿದು ಬಂದಿದೆ. ಇವರು ಬೇಡರಹಟ್ಟಿ ಗ್ರಾಮದಿಂದ ಅಥಣಿಗೆ ಬೈಕ್ ಮೇಲೆ ತೆರಳುವ ಸಂದರ್ಭದಲ್ಲಿ ಅಫಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದು ಅಥಣಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೋಲಿಸ

ಅಥಣಿ:ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಸವಾರ‌ ಸ್ಥಳದಲ್ಲೇ ಸಾವು Read More »

ಕಿನ್ನಿಗೋಳಿ: ಅತಿವೇಗದ ಕಾರ್ ಡಿಕ್ಕಿ, ಮಹಿಳೆ ಗಂಭೀರ

ಸಮಗ್ರ ನ್ಯೂಸ್: ಪಾದಚಾರಿ ಮಹಿಳೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಆಕೆ ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿಯ ಮುಖ್ಯರಸ್ತೆಯಲ್ಲಿ ಸಂಭವಿಸಿದೆ. ಗಾಯಾಳುವನ್ನು ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ ಎಂದು ಗುರುತಿಸಲಾಗಿದೆ. ಜಯಂತಿ ಅವರು ಕಿನ್ನಿಗೋಳಿ ಚರ್ಚ್ ಕಡೆಯಿಂದ ತರಕಾರಿ ಹಿಡಿದುಕೊಂಡು ನಡೆದುಕೊಂಡು ಬರುತ್ತಿದ್ದ ಸಂದರ್ಭ ಕಿನ್ನಿಗೋಳಿ ಕಡೆಯಿಂದ ಮೂರುಕಾವೇರಿ ಕಡೆಗೆ ಸಂಚರಿಸುತ್ತಿದ್ದ ಬ್ರೀಜಾ ಕಾರು ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ದೂರಕ್ಕೆ ಹಾರಿದ್ದು ಗಂಭೀರ ಗಾಯಗೊಂಡಿದ್ದಾರೆ.

ಕಿನ್ನಿಗೋಳಿ: ಅತಿವೇಗದ ಕಾರ್ ಡಿಕ್ಕಿ, ಮಹಿಳೆ ಗಂಭೀರ Read More »

ಗುಜರಾತ್ ಚುನಾವಣೆಗೆ ಮುಹೂರ್ತ ಫಿಕ್ಸ್| ಡಿಸೆಂಬರ್ ನಲ್ಲಿ ನಡೆಯಲಿದೆ ಎರಡು‌ ಹಂತದ ಮತದಾನ

ಸಮಗ್ರ ನ್ಯೂಸ್: ಬಹು ನಿರೀಕ್ಷಿತ ಗುಜರಾತ್ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಗುರುವಾರ ಮಧ್ಯಾಹ್ನ ಪ್ರಕಟಿಸಿದೆ. ಚುನಾವಣೆಯು ಡಿಸೆಂಬರ್ 1 ಹಾಗೂ 5 ರಂದು ಎರಡು ಹಂತದಲ್ಲಿ ನಡೆಯಲಿದೆ. ಡಿಸೆಂಬರ್ 8ರಂದು ಹಿಮಾಚಲ ಪ್ರದೇಶದ ಜೊತೆಗೆ ಗುಜರಾತ್ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಭೀಕರ ಸೇತುವೆ ಕುಸಿತ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಮಾಧ್ಯಮಗಳೊಂದಿಗೆ ತಮ್ಮ ಸಂವಾದವನ್ನು ಆರಂಭಿಸಿದರು. ಗುಜರಾತ್‌ನಲ್ಲಿ 4.9 ಕೋಟಿ ಮತದಾರರು ತಮ್ಮ ಹಕ್ಕು

ಗುಜರಾತ್ ಚುನಾವಣೆಗೆ ಮುಹೂರ್ತ ಫಿಕ್ಸ್| ಡಿಸೆಂಬರ್ ನಲ್ಲಿ ನಡೆಯಲಿದೆ ಎರಡು‌ ಹಂತದ ಮತದಾನ Read More »

ರಾಜ್ಯದಲ್ಲಿ ಐದು ದಿನ ಸಾಧಾರಣ ಮಳೆ ಸಂಭವ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಗುರುವಾರ ಯೆಲ್ಲೋ ಅಲರ್ಟ್‌ ಘೋಷಿಸಿದ್ದು ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಉಳಿದೆಡೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ನ.7ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಐದು ದಿನ ಸಾಧಾರಣ ಮಳೆ ಸಂಭವ Read More »

ಕಾಂಗ್ರೆಸ್ ಗೆ ಬಿಗ್ ಶಾಕ್| ಮುದ್ದಹನುಮೇಗೌಡ ಸೇರಿ‌ ಹಲವರು ಬಿಜೆಪಿಗೆ ಸೇರ್ಪಡೆ

ಸಮಗ್ರ ನ್ಯೂಸ್: ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ‌ ಸಂಸದ ಎಸ್​.ಪಿ. ಮುದ್ದಹನುಮೇಗೌಡ ಮತ್ತು ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದರೂ ಆದ ನಟ ಶಶಿಕುಮಾರ್ ಇಂದು(ನ.೩) ಬಿಜೆಪಿ ಸೇರ್ಪಡೆಯಾದರು. ನಗರದ ಬಿಜೆಪಿ ಕಚೇರಿಯಲ್ಲಿ ಇಬ್ಬರಿಗೂ ಬಿಜೆಪಿ ಶಾಲು ಹೊದಿಸಿ, ಬಿಜೆಪಿ ಬಾವುಟ ಕೈಗೆ ಕೊಟ್ಟು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್​ ಕಟೀಲ್​ ಅವರು ಸ್ವಾಗತಿಸಿದರು. ಇದೇ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಕೂಡ ಬಿಜೆಪಿಗೆ ಸೇರ್ಪಡೆಯಾದರು. ಸಚಿವರಾದ ಅಶ್ವಥ್ ನಾರಾಯಣ್, ಎಸ್.ಟಿ.

ಕಾಂಗ್ರೆಸ್ ಗೆ ಬಿಗ್ ಶಾಕ್| ಮುದ್ದಹನುಮೇಗೌಡ ಸೇರಿ‌ ಹಲವರು ಬಿಜೆಪಿಗೆ ಸೇರ್ಪಡೆ Read More »

ಪ್ರಧಾನಿ ಭಾಷಣದ ವೇಳೆ ಪೆಂಡಾಲ್ ನಿಂದ ಬೋಲ್ಟ್ ತೆಗೆದ ಭೂಪ| ಆರೋಪಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಗುಜರಾತ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡುತ್ತಿರುವಾಗಲೇ ಸಾರ್ವಜನಿಕವಾಗಿ ಹಾಕಲಾದ ಪೆಂಡಾಲ್‌ನಿಂದ ಬೋಲ್ಟ್ ಅನ್ನು ತೆಗದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಳೆದ ಅಕ್ಟೋಬರ್ 31ರಂದು ಥರಾಡ್‌ನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಯಲ್ಲಿನ ವಿಡಿಯೋವೊಂದು ವೈರಲ್ ಆಗಿತ್ತು. ಒಂದು ಕಡೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದರೆ, ಇನ್ನೊಂದು ಮಗ್ಗಲಿನಲ್ಲಿ ಸಾರ್ವಜನಿಕ ಸಭೆಗಾಗಿ ಹಾಕಿದ್ದ ಮಂಟಪದ ಬೋಲ್ಟ್ ಅನ್ನು ಬಿಚ್ಚಿ, ತೆಗೆಯುತ್ತಿರುವುದು ವಿಡಿಯೋದಲ್ಲಿ ಗೋಚರಿಸಿತು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್

ಪ್ರಧಾನಿ ಭಾಷಣದ ವೇಳೆ ಪೆಂಡಾಲ್ ನಿಂದ ಬೋಲ್ಟ್ ತೆಗೆದ ಭೂಪ| ಆರೋಪಿಯನ್ನು ಬಂಧಿಸಿದ ಪೊಲೀಸರು Read More »

ಪಾಕಿಸ್ತಾನಕ್ಕಿಂದು ಮಾಡು ಇಲ್ಲವೇ ಮಡಿ ಪಂದ್ಯ| ಬಾಂಗ್ಲಾವನ್ನು ಅಡಿಲೇಡ್ ನಲ್ಲಿ ಪುಡಿಗಟ್ಟಿದ ಭಾರತ| ಟ 20 ಹೈಲೈಟ್ಸ್ ಇಲ್ಲಿದೆ…

ಸಮಗ್ರ ನ್ಯೂಸ್: ಟಿ20 ವಿಶ್ವಕಪ್ ರೋಚಕ ಘಟ್ಟವನ್ನು ತಲುಪಿದ್ದು ಗುರುವಾರ ನಡೆಯಲಿರುವ ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಕದನ ಸಾಕಷ್ಟು ಕುತೂಹಲ ಮೂಡಿಸಿದೆ. ಸೆಮಿಫೈನಲ್‌ಗೇರುವ ಸ್ಪರ್ಧೆಯಲ್ಲಿ ಪಾಕಿಸ್ತಾನ ತಂಡ ಉಳಿದುಕೊಳ್ಳಬೇಕಾದರೆ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಾಗಿದೆ. ಸಾಕಷ್ಟು ಉತ್ತಮ ಅಂತರದೊಂದಿಗೆ ಗೆಲುವು ಸಾಧಿಸುವುದು ಪಾಕ್ ಪಾಲಿಗೆ ಅನಿವಾರ್ಯವಾಗಿದೆ. ದಕ್ಷಿಣ ಆಫ್ರಿಕಾ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಸೋಲು ಅನುಭವಿಸದೆ ಅಜೇಯವಾಗಿರುವ ಏಕೈಕ ತಂಡವಾಗಿದೆ. ಸೂಪರ್ 12 ಹಂತದಲ್ಲಿ ಈಗಾಗಲೇ ದಕ್ಷಿಣ ಆಫ್ರಿಕಾ ತಂಡದ

ಪಾಕಿಸ್ತಾನಕ್ಕಿಂದು ಮಾಡು ಇಲ್ಲವೇ ಮಡಿ ಪಂದ್ಯ| ಬಾಂಗ್ಲಾವನ್ನು ಅಡಿಲೇಡ್ ನಲ್ಲಿ ಪುಡಿಗಟ್ಟಿದ ಭಾರತ| ಟ 20 ಹೈಲೈಟ್ಸ್ ಇಲ್ಲಿದೆ… Read More »

ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಸೇರಿದ ‌ಆಂಬ್ಯುಲೆನ್ಸ್ ಗೆ ಲಾರಿ ಡಿಕ್ಕಿ

ಸಮಗ್ರ ನ್ಯೂಸ್: ಟಿಪ್ಪರ್ ಲಾರಿಯೊಂದು ಅಂಬ್ಯುಲೆನ್ಸ್ ವಾಹನಕ್ಕೆ ಡಿಕ್ಕಿಯಾದ ಘಟನೆ ಮೆಲ್ಕಾರ್ ಸಮೀಪದ ನರಹರಿ ಎಂಬಲ್ಲಿ ನ.2ರ ರಾತ್ರಿ ವೇಳೆ ಸಂಭವಿಸಿದೆ. ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಸೇರಿದ ‌ಆಂಬ್ಯುಲೆನ್ಸ್ ಇದಾಗಿದ್ದು, ರೋಗಿಯೋರ್ವರನ್ನು ಕೆ.ವಿ.ಜಿ.ಆಸ್ಪತ್ರೆಯಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಈ‌ ಘಟನೆ ನಡೆದಿದೆ. ದಿವ್ಯ ರೂಪ ಗುತ್ತಿಗೆ ಸಂಸ್ಥೆಗೆ ಸೇರಿದ ಲಾರಿ‌ ಇದಾಗಿದ್ದು, ಅಪಘಾತದಲ್ಲಿ ಚಾಲಕ ಸಹಿತ ರೋಗಿಗೆ ಯಾವುದೇ ಅಪಾಯವಾಗಿಲ್ಲ.

ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಸೇರಿದ ‌ಆಂಬ್ಯುಲೆನ್ಸ್ ಗೆ ಲಾರಿ ಡಿಕ್ಕಿ Read More »

ಸುಳ್ಯ: ಗ್ರಾ.ಪಂ ಪಿಡಿಒ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಹೃದಯಾಘಾತ ಸಂಭವಿಸಿ‌ ಪಿಡಿಒ ಒಬ್ಬರು ಸಾವನ್ನಪ್ಪಿದ ಘಟನೆ ದ.ಕ ಜಿಲ್ಲೆಯ ಸುಳ್ಯದಿಂದ ವರದಿಯಾಗಿದೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ಹೃದಯಾಘಾತಕ್ಕೆ ಬಲಿಯಾದವರು. ಇವರಿಗೆ ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತಂದರಾದರೂ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ದೀರ್ಘ ಕಾಲ ಸೇವೆ ಸಲ್ಲಿದ್ದ ಶೇಖರ್ ರವರು‌ ಬಳಿಕ ಸುಬ್ರಹ್ಮಣ್ಯ ಗ್ರಾ.ಪಂ. ಪಿಡಿಒ ಆಗಿ ವರ್ಗಾವಣೆ ಯಾಗಿದ್ದರು. ಮೃತರು

ಸುಳ್ಯ: ಗ್ರಾ.ಪಂ ಪಿಡಿಒ ಹೃದಯಾಘಾತದಿಂದ ಸಾವು Read More »