November 2022

ತನ್ನ ಕ್ಯಾಬಿನ್ ಸಿಬ್ಬಂದಿಗೆ ಹೊಸ ನಿಯಮವನ್ನು ಜಾರಿ ಮಾಡಿದ ಏರ್ ಇಂಡಿಯಾ

ನವದೆಹಲಿ: ಟಾಟಾ ಒಡೆತನದ ಏರ್ ಇಂಡಿಯಾ ತನ್ನ ಕ್ಯಾಬಿನ್ ಸಿಬ್ಬಂದಿಗೆ ಹೊಸ ನಿಯಮವನ್ನು ಜಾರಿ ಮಾಡಿದೆ. ಹೊಸ ನಿಯಮದ ಪ್ರಕಾರ ಕೂದಲು ಉದುರಿರುವ ಪುರುಷ ಸಿಬ್ಬಂದಿ ಸಂಪೂರ್ಣವಾಗಿ ತಲೆ ಕೂದಲನ್ನು ತೆಗೆಸಿಕೊಂಡು ಕೆಲಸಕ್ಕೆ ಬರುವಂತೆ ಸೂಚಿಸಿದೆ. ಇನ್ನೂ ಮಹಿಳೆಯರು ಅರಳು ಇರುವ ಕಿವಿ ಓಲೆಗಳನ್ನು ಧರಿಸದಂತೆ ಸೂಚಿಸಿದೆ. ದಶಕಗಳ ಕಾಲದಿಂದ ವಿಮಾನ ಸೇವೆ ಒದಗಿಸುತ್ತಿರುವ ಏರ್ ಇಂಡಿಯಾ ತನ್ನ ಸಿಬ್ಬಂದಿ ವಸ್ತ್ರಸಂಹಿತೆ ಅಂತಾರಾಷ್ಟ್ರೀಯ ಮಾನದಂಡಕ್ಕೆ ಅನುಗುಣವಾಗಿಲ್ಲ ಎಂಬ ಕಾರಣಕ್ಕೆ ಅದನ್ನು ಬದಲಾಯಿಸಲು ತೀರ್ಮಾನಿಸಿದೆ. ತಲೆಯಲ್ಲಿ ಹೆಚ್ಚು ಕೂದಲು […]

ತನ್ನ ಕ್ಯಾಬಿನ್ ಸಿಬ್ಬಂದಿಗೆ ಹೊಸ ನಿಯಮವನ್ನು ಜಾರಿ ಮಾಡಿದ ಏರ್ ಇಂಡಿಯಾ Read More »

9 ಮತ್ತು 10ನೇ ತರಗತಿಗಳು ಇನ್ನು ಮುಂದೆ ಪ್ರೌಢಶಿಕ್ಷಣದ ತರಗತಿಗಳಲ್ಲ!

ಸಮಗ್ರ ನ್ಯೂಸ್: ಇಷ್ಟು ದಿನ 9 ಮತ್ತು 10ನೇ ತರಗತಿಗಳನ್ನ ಪ್ರೌಢ ಶಾಲೆಗಳು ಎಂದು ಕರೆಯಲಾಗುತ್ತಿತ್ತು. ಆದರೆ ಇನ್ನು ಮುಂದಿನ ದಿನಗಳಲ್ಲಿ 9 ಮತ್ತು 10ನೇ ತರಗತಿಗಳನ್ನ ಪ್ರಾಥಮಿಕ ಶಿಕ್ಷಣದ ” ಮುಂದುವರಿದ ಶಿಕ್ಷಣ” ಎಂದು ಕರೆಯಲಾಗುತ್ತದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಜ್ಞಾಪಕ ಪತ್ರವನ್ನು ಹೊರಡಿಸಿದೆ. ಈ ಜ್ಞಾಪಕ ಪತ್ರದ ಪ್ರಕಾರ 9 ಮತ್ತು 10ನೇ ತರಗತಿಗಳು ಇನ್ನು ಮುಂದೆ ಪ್ರೌಢಶಿಕ್ಷಣದ ತರಗತಿಗಳಲ್ಲ. ಪ್ರಾಥಮಿಕ ಶಿಕ್ಷಣದ ಭಾಗವಾಗಲಿವೆ. ಶಿಕ್ಷಣ ಇಲಾಖೆ ಹೊರಡಿಸಿರು ಜ್ಞಾಪಕ ಪತ್ರದಲ್ಲಿ,

9 ಮತ್ತು 10ನೇ ತರಗತಿಗಳು ಇನ್ನು ಮುಂದೆ ಪ್ರೌಢಶಿಕ್ಷಣದ ತರಗತಿಗಳಲ್ಲ! Read More »

75ನೇ ವಸಂತಕ್ಕೆ ಕಾಲಿಟ್ಟ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನ. 25ರಂದು 75ನೇ ವಸಂತಕ್ಕೆ ಕಾಲಿಡಲಿದ್ದು, ತಮ್ಮ ನಿವಾಸದಲ್ಲಿ ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವರು. ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರನಾಗಿ 1948ರ ನ. 25ರಂದು ಜನಿಸಿದ ವೀರೇಂದ್ರ ಕುಮಾರ್‌ ಅವರು ಡಿ. ವೀರೇಂದ್ರ ಹೆಗ್ಗಡೆಯಾಗಿ 1964ರ ಅ. 24ರಂದು ಧರ್ಮಸ್ಥಳದ 21 ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾಗಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ವಉದ್ಯೋಗ

75ನೇ ವಸಂತಕ್ಕೆ ಕಾಲಿಟ್ಟ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ Read More »

ಏಳು ಕೊಪ್ಪ‌ ದಾಟಿ ಘಟ್ಟ ಹತ್ತಿದ ಕೊರಗಜ್ಜ| ದೈವದ ಹೆಸರಲ್ಲಿ‌ ದುಡ್ಡು ಮಾಡಲು ಹೊರಟ ಬೆಂಗಳೂರಿನ ಮಹಿಳೆ| ಕರಾವಳಿಯಲ್ಲಿ ಕೋಲಾಹಲ

ಸಮಗ್ರ ನ್ಯೂಸ್: ಕಾಂತಾರ ಸಿನಿಮಾ ಕರಾವಳಿಯ ದೈವಾರಾಧನೆಯನ್ನು ಪ್ರಪಂಚದಾದ್ಯಂತ ಪರಿಚಯಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿಯೂ ಈಗ ದೈವಕೋಲ, ದೈವಸ್ಥಾನದ ವೈಭವ ಶುರುವಾಗಿದ್ದು, ಕರಾವಳಿಯಲ್ಲಿ ಕೋಲಾಹಲ ಹಬ್ಬಿದೆ. ಕಾಂತಾರ ಸಿನಿಮಾ ಅಬ್ಬರದ ಓಟದ ಹಿಂದೆ ದೈವಶಕ್ತಿಯ ಪ್ರೇರಣೆ ಇದೆ ಅನ್ನೋದು ಚಿತ್ರತಂಡದ ಮಾತು. ಕರಾವಳಿಯ ಭಾಗದ ದೈವಾರಾಧನೆ ಸಂಸ್ಕೃತಿ ಈಗ ಇಡಿ ದೇಶಕ್ಕೆ ಚಿರಪರಿಚಿತವಾಗಿದೆ. ಆದರೆ ಈಗ ಬೆಂಗಳೂರಿನಲ್ಲಿ ಮಾತ್ರ ಹೊಸ ದೈವದ ವಿಚಾರದಲ್ಲಿ ದೊಡ್ಡ ಸಮರ ಶುರುವಾಗಿದೆ. ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಈಗ ಕೊರಗಜ್ಜನ ದೈವಸ್ಥಾನ ಶುರುವಾಗಿದೆ. ಅಲ್ಲದೆ ಬೆಂಗಳೂರಿನಲ್ಲಿ

ಏಳು ಕೊಪ್ಪ‌ ದಾಟಿ ಘಟ್ಟ ಹತ್ತಿದ ಕೊರಗಜ್ಜ| ದೈವದ ಹೆಸರಲ್ಲಿ‌ ದುಡ್ಡು ಮಾಡಲು ಹೊರಟ ಬೆಂಗಳೂರಿನ ಮಹಿಳೆ| ಕರಾವಳಿಯಲ್ಲಿ ಕೋಲಾಹಲ Read More »

ಹವಾಮಾನ ವರದಿ: ಇನ್ನೆರಡು ದಿನವೂ ರಾಜ್ಯದಾದ್ಯಂತ ‌ಮಳೆ

ಸಮಗ್ರ ನ್ಯೂಸ್: ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ವಾಯುಭಾರ ಕುಸಿತ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇಂದು ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ನಾಳೆಯೂ ಮಳೆ ಮುನ್ಸೂಚನೆ ಇದೆ. ಕರಾವಳಿ ಹಾಗೂ

ಹವಾಮಾನ ವರದಿ: ಇನ್ನೆರಡು ದಿನವೂ ರಾಜ್ಯದಾದ್ಯಂತ ‌ಮಳೆ Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಎಡಿಜಿಪಿ ಅಲೋಕ್ ಕುಮಾರ್ ಕೂಡಾ ಟಾರ್ಗೆಟ್? ಪೋಸ್ಟರ್ ವೈರಲ್; ತನಿಖೆ ಚುರುಕು

ಸಮಗ್ರ ನ್ಯೂಸ್: ಮಂಗಳೂರು ನಗರದ ಕಂಕನಾಡಿ ಸಮೀಪದಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ವಿವಿಧ ಆಯಾಮಗಳಲ್ಲಿ ಮುನ್ನಡೆಸಲಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್ ಒಂದು ವೈರಲ್ ಆಗುತ್ತಿದೆ. ವೈರಲ್ ಆಗುತ್ತಿರುವ ಪೋಸ್ಟ್ ಗೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಒಂದು ಸಂಘಟನೆ ಏಕಾಏಕಿ ಪೋಸ್ಟ್ ಹಾಕಿಕೊಂಡಿದ್ದು ಸ್ವತಃ ಈ ಕೃತ್ಯದ ಹೊಣೆ ಹೆಗಲೇರಿಸಿಕೊಂಡಿದೆ. ವೈರಲ್ ಆಗುತ್ತಿರುವ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಅವರು ‘ನಾವು ಸಂಘಟನೆ ಮತ್ತು ಆ ಪೋಸ್ಟ್

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಎಡಿಜಿಪಿ ಅಲೋಕ್ ಕುಮಾರ್ ಕೂಡಾ ಟಾರ್ಗೆಟ್? ಪೋಸ್ಟರ್ ವೈರಲ್; ತನಿಖೆ ಚುರುಕು Read More »

ಬದಲಾಗಿದೆ ‘ಕಾಂತಾರ’ ದ ‘ವರಾಹರೂಪಂ’ ಹಾಡು| ಹೊಸ ಟ್ಯೂನ್ ಹೇಗಿದೆ ಗೊತ್ತಾ?

ಸಮಗ್ರ ನ್ಯೂಸ್: ಕಾಂತಾರ’ ಚಿತ್ರದ ‘ವರಾಹ ರೂಪಂ..’ ಹಾಡು ವಿವಾದದಿಂದ ಸಮಸ್ಯೆ ಎದುರಿಸಿತ್ತು. ಕೇರಳದ ಸ್ಥಳೀಯ ನ್ಯಾಯಾಲಯ ಈ ಹಾಡನ್ನು ಪ್ರಸಾರ ಮಾಡದಂತೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ‘ಹೊಂಬಾಳೆ ಫಿಲ್ಮ್ಸ್​’ ಕೇರಳ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಕೆ ಮಾಡಿತ್ತು. ಆದರೆ, ಇದನ್ನು ಹೈಕೋರ್ಟ್ ರದ್ದು ಮಾಡಿ ಆದೇಶ ನೀಡಿದೆ. ಇದರಿಂದ ಚಿತ್ರಕ್ಕೆ ಹಿನ್ನಡೆಯಾಗಿದ್ದು ಈ ಕಾರಣದಿಂದ ಹಾಡಿನ ಟ್ಯೂನ್ ಬದಲಿಸಲಾಗಿದೆ. ‘ವರಾಹ ರೂಪಂ..’ ಹಾಡು ‘ಕಾಂತಾರ’ ಕ್ಲೈಮ್ಯಾಕ್ಸ್​ನಲ್ಲಿ ಬರುತ್ತದೆ. ಈ ಸಾಂಗ್ ಸಾಕಷ್ಟು ಗಮನ ಸೆಳೆದಿತ್ತು. ಹಾಡನ್ನು

ಬದಲಾಗಿದೆ ‘ಕಾಂತಾರ’ ದ ‘ವರಾಹರೂಪಂ’ ಹಾಡು| ಹೊಸ ಟ್ಯೂನ್ ಹೇಗಿದೆ ಗೊತ್ತಾ? Read More »

ಬದಲಾಗಿದೆ ‘ಕಾಂತಾರ’ ದ ‘ವರಾಹರೂಪಂ’ ಹಾಡು| ಹೊಸ ಟ್ಯೂನ್ ಹೇಗಿದೆ ಗೊತ್ತಾ?

ಸಮಗ್ರ ನ್ಯೂಸ್: ಕಾಂತಾರ’ ಚಿತ್ರದ ‘ವರಾಹ ರೂಪಂ..’ ಹಾಡು ವಿವಾದದಿಂದ ಸಮಸ್ಯೆ ಎದುರಿಸಿತ್ತು. ಕೇರಳದ ಸ್ಥಳೀಯ ನ್ಯಾಯಾಲಯ ಈ ಹಾಡನ್ನು ಪ್ರಸಾರ ಮಾಡದಂತೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ‘ಹೊಂಬಾಳೆ ಫಿಲ್ಮ್ಸ್​’ ಕೇರಳ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಕೆ ಮಾಡಿತ್ತು. ಆದರೆ, ಇದನ್ನು ಹೈಕೋರ್ಟ್ ರದ್ದು ಮಾಡಿ ಆದೇಶ ನೀಡಿದೆ. ಇದರಿಂದ ಚಿತ್ರಕ್ಕೆ ಹಿನ್ನಡೆಯಾಗಿದ್ದು ಈ ಕಾರಣದಿಂದ ಹಾಡಿನ ಟ್ಯೂನ್ ಬದಲಿಸಲಾಗಿದೆ. ‘ವರಾಹ ರೂಪಂ..’ ಹಾಡು ‘ಕಾಂತಾರ’ ಕ್ಲೈಮ್ಯಾಕ್ಸ್​ನಲ್ಲಿ ಬರುತ್ತದೆ. ಈ ಸಾಂಗ್ ಸಾಕಷ್ಟು ಗಮನ ಸೆಳೆದಿತ್ತು. ಹಾಡನ್ನು

ಬದಲಾಗಿದೆ ‘ಕಾಂತಾರ’ ದ ‘ವರಾಹರೂಪಂ’ ಹಾಡು| ಹೊಸ ಟ್ಯೂನ್ ಹೇಗಿದೆ ಗೊತ್ತಾ? Read More »

ಮುಖ, ಮೈ ಮೇಲೆಲ್ಲಾ ಕೂದಲು!
ಅಪರೂಪದ ಕಾಯಿಲೆಗೆ ತುತ್ತಾದ ಮಧ್ಯಪ್ರದೇಶದ ಯುವಕ

ಮಧ್ಯಪ್ರದೇಶ:ಮಧ್ಯಪ್ರದೇಶದ ರತ್ಲಾಮ್‌ ಜಿಲ್ಲೆಯ ಚಿಕ್ಕ ಹಳ್ಳಿಯ ಲಲಿತ್ ಪಾಟಿದಾರ್ (17) ಎಂಬ ಯುವಕನೊಬ್ಬ ಅಪರೂಪದ ‘ವೆರ್‌ವುಲ್ಫ್ ಸಿಂಡ್ರೋಮ್’ ಕಾಯಿಲೆಯಿಂದ ಬಳಲುತ್ತಿದ್ದು, ಮುಖ ಸೇರಿ ದೇಹದ ತುಂಬೆಲ್ಲ ದಟ್ಟವಾದ ಕೂದಲು ಬೆಳೆಯುತ್ತಿವೆ. ಪಾಟಿದಾರ್ ಹುಟ್ಟಿನಿಂದಲೇ ಅನಾರೋಗ್ಯದಿಂದ ಬಳಲುತ್ತಿದ್ದು, ಇಲ್ಲಿಯವರಗೆ ಕೇವಲ 50 ಜನರು ಮಾತ್ರ ಈ ಅಪರೂಪದ ಕಾಯಿಲೆಗೆ ತುತ್ತಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಬೇಸರ ವ್ಯಕ್ತಪಡಿಸಿರುವ ಲಲಿತ್, ನನ್ನ ದೇಹ ಪೂರ್ತಿಯಾಗಿ ಕೂದಲು ಆವರಿಸಿಕೊಂಡಿದ್ದು, ನನ್ನ ಸಹಪಾಠಿಗಳು ನನ್ನನ್ನು ಕೋತಿ ಹುಡುಗ ಎಂದು ಕರೆಯುತ್ತಾರೆ ಮತ್ತು ಕಚ್ಚುವ

ಮುಖ, ಮೈ ಮೇಲೆಲ್ಲಾ ಕೂದಲು!
ಅಪರೂಪದ ಕಾಯಿಲೆಗೆ ತುತ್ತಾದ ಮಧ್ಯಪ್ರದೇಶದ ಯುವಕ
Read More »

ಉಡುಪಿ:ರಕ್ತದೊತ್ತಡ ಕಡಿಮೆಯಾಗಿ‌ ಯುವತಿ ಸಾವು

ಸಮಗ್ರ ನ್ಯೂಸ್: ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ರೋಸ್ ಕಾರ್ಯಕ್ರಮದ ವೇಳೆ ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು ಯುವತಿ ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ ಕೊಳಲಗಿರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಸಮಾರಂಭಕ್ಕೆ ತೆರಳಿದ್ದರು. ಅಲ್ಲಿ 8.30ರ ಸುಮಾರಿಗೆ ಏಕಾಏಕಿಯಾಗಿ ರಕ್ತದ ಒತ್ತಡ ಕಡಿಮೆಯಾದ ಪರಿಣಾಮ ಜೋಸ್ನಾ ಅವರು ಅಲ್ಲೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಮಣಿಪಾಲ

ಉಡುಪಿ:ರಕ್ತದೊತ್ತಡ ಕಡಿಮೆಯಾಗಿ‌ ಯುವತಿ ಸಾವು Read More »