ಸಮಗ್ರ ನ್ಯೂಸ್: ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸಿದ ಕುಖ್ಯಾತ ಆಂತಾರಾಜ್ಯ ಜ್ಯುವೆಲ್ಲರಿ ಮತ್ತು ಬ್ಯಾಂಕ್ ದರೋಡೆ ಗ್ಯಾಂಗ್ ನ 9 ಮಂದಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ದರೋಡೆಗಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಸಾಮಾಗ್ರಿಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನವೆಂಬರ್29- 30ರಂದು ರಾತ್ರಿ ವೇಳೆಯಲ್ಲಿ ತೊಕ್ಕೊಟ್ಟು ಮಂಚಿಲ ಪರಿಸರದ ಮನೆಯೊಂದರಲ್ಲಿ ಉತ್ತರ ಭಾರತದ ಕುಖ್ಯಾತ ” ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ” ನ ವ್ಯಕ್ತಿಗಳು ತೊಕ್ಕೊಟ್ಟಿನ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸುತ್ತಾರೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರವರ ನೇತೃತ್ವದಲ್ಲಿನ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಬಂಧಿತರು ಭಾಸ್ಕರ ಬೆಳ್ಚಪಾಡ(65),ಬಂಟ್ವಾಳ, ಕನ್ಯಾನ( ಗಾಂಧಿವಾಡಿ, ಗುಜರಾತ್)ದಿನೇಶ್ ರಾವಲ್ ಅಲಿಯಾಸ್ ಸಾಗರ್ (38), ಗುಜರಾತ್. (ನೇಪಾಳ) ಮೊಹಮ್ಮದ್ ಜಾಮೀಲ್ ಶೇಖ್(29), ಸಾಹೇಬ್ ಗಂಜ್ ಜಿಲ್ಲೆ, ಜಾರ್ಖಂಡ್, ಇಂಜಮಾಮ್ ಉಲ್ ಹಕ್(27), ಜಾರ್ಖಂಡ್, ಬಿಸ್ತ ರೂಪ್ ಸಿಂಗ್ (34),ನೇಪಾಳ, ಕೃಷ್ಣ ಬಹದ್ದೂರ್ ಬೋಗಟಿ(41), ಹೈದರಾಬಾದ್,ನೇಪಾಳ, ಇಮ್ದದುಲ್ ರಝಾಕ್ ಶೇಖ್(32)ಜಾರ್ಖಂಡ್ , ಬಿವುಲ್ ಶೇಖ್(31)ಸಾಹೇಜ್ ಗಂಜ್, ಜಾರ್ಖಂಡ್ ಮತ್ತು ಇಮ್ರಾನ್ ಶೇಖ್(30), ಜಾರ್ಖಂಡ್ ಎಂದು ತಿಳಿದುಬಂದಿದೆ.